
ದಾಬಸ್‌ಪೇಟೆ(ಜ.14): ತನಗೆ 19 ವರ್ಷವಿದ್ದಾಗಲೇ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿ ಮೂರು ವರ್ಷ ಶಿಕ್ಷೆ ಅನುಭವಿಸಿದ್ದ ವ್ಯಕ್ತಿಯೊಬ್ಬ ಜೈಲಿಂದ ಹೊರಬಂದ ಕೇವಲ ಒಂದೇ ವಾರದಲ್ಲಿ ಮತ್ತೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸೆಗಿದ ಆಘಾತಕಾರಿ ಪ್ರಕರಣ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಖಾಸಗಿ ಬಸ್ ಕ್ಲೀನರ್, ದೊಡ್ಡಬಳ್ಳಾಪುರದ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಆನಂದ್ (24) ಅತ್ಯಾಚಾರವೆಸೆಗಿರುವ ಆರೋಪಿ. ಈತ ಶಾಲೆಗೆ ಹೋಗಿ ಬರುತ್ತಿದ್ದ 14 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಈತನನ್ನು ಬಂಧಿಸಿದ್ದಾರೆ.
ಹಾವೇರಿಯಲ್ಲಿ ನಡೆದಿದ್ದು ನೈತಿಕ ಪೊಲೀಸ್‌ಗಿರಿಯಲ್ಲ, ಸಾಮೂಹಿಕ ಅತ್ಯಾಚಾರ; ಇಲ್ಲಿದ್ದಾರೆ ನೋಡಿ ಗ್ಯಾಂಗ್ ರೇಪಿಸ್ಟ್?
ಪ್ರಕರಣವೇನು?:
ಸೋಂಪುರ ಮೂಲದ ವಿದ್ಯಾರ್ಥಿನಿಯು ವಾರದ ಹಿಂದೆ ಶಾಲೆಗೆ ಹೋಗಿ ಮತ್ತೆ ಮನೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಳು. ಮಗಳು ನಾಪತ್ತೆಯಾಗಿರುವ ಬಗ್ಗೆ ದಾಬಸ್‌ಪೇಟೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಕರೆ ಆಧಾರದ ಮೇಲೆ ತನಿಖೆ ಆರಂಭಿಸಿದ ದಾಬಸ್‌ಪೇಟೆ ಪೊಲೀಸರು ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಸಂತ್ರಸ್ತ ಬಾಲಕಿ ದಾಬಸ್‌ಪೇಟೆಯಿಂದ ತ್ಯಾಮಗೊಂಡ್ಲುನಲ್ಲಿರುವ ಶಾಲೆಗೆ ದಿನನಿತ್ಯ ಖಾಸಗಿ ಬಸ್‌ನಲ್ಲಿ ಹೋಗಿ ಬರುತ್ತಿದ್ದಳು. ಆಗ ಬಸ್‌ನಲ್ಲಿ ಆರೋಪಿ ಪರಿಚಯವಾ ಗಿದ್ದು, ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ ಎನ್ನಲಾಗಿದೆ.
ಆನಂದ್ 2021ರಲ್ಲಿ ಬ್ಯಾಡರಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಫೋಕ್ಸೋ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಬಳಿಕ, ಮೂರು ವರ್ಷ ಶಿಕ್ಷೆ ಅನುಭವಿಸಿ ಕಳೆದ ವಾರವಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ