ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಬೆವೂರು ರೈಲ್ವೇ ಮೇಲ್ವೇತುವೆಯ ಕೆಳಗಡೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು ತನಿಖೆಗೆ ಹೋದ ಮೂಲ್ಕಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ರೈಲು ಬರುವ ವೇಳೆ ಸಂಕಷ್ಟಕ್ಕೆ ಸಿಲುಕಿ, ಬದುಕಿ ಬಂದಿದ್ದಾರೆ.
ಮೂಲ್ಕಿ (ಅ.25): ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಬೆವೂರು ರೈಲ್ವೇ ಮೇಲ್ವೇತುವೆಯ ಕೆಳಗಡೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು ತನಿಖೆಗೆ ಹೋದ ಮೂಲ್ಕಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ರೈಲು ಬರುವ ವೇಳೆ ಬದಿಗೆ ಹಾರಿ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ಪಾರಾದ ಘಟನೆ ನಡೆದಿದೆ.
ಮೂಲ್ಕಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಕುಮಾರ್ ಎಂಬವರ ಪುತ್ರನಾದ ಮೂಲತಃ ತಮಿಳುನಾಡು ನಿವಾಸಿ ವಿಶ್ಲೇಶ್ (26) ಭಾನುವಾರ ರಾತ್ರಿ 8:30 ಸುಮಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ಲೇಶ್ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಸುರತ್ಕಲ್ ಎನ್‌ಐಟಿಕೆ ಯಲ್ಲಿ ತರಬೇತಿ ಮಾಡುತ್ತಿದ್ದರು ಎನ್ನಲಾಗಿದ್ದು, ಕೆಲಸ ಇಲ್ಲದೆ ಇರುವ ಚಿಂತೆ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆ, ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ದಿನಾಂಕ ಬದಲಿಸಲು ಖರ್ಗೆ ಮನವಿ
ಈ ನಡುವೆ ಯುವಕನ ಆತ್ಮಹತ್ಯೆಯ ತೀವ್ರ ಇಕ್ಕಟ್ಟಾಗಿರುವ ಕುಬೆವೂರು ರೈಲ್ವೆ ಮೇಲ್ವೇತುವೆ ಕೆಳಗಡೆ ನಡೆದಿದ್ದು, ತನಿಖೆಗೆ ಹೋದ ನಾಲ್ವರು ಮೂಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಎಸ್‌ಐ ಸಂಜೀವ, ಚಂದ್ರಶೇಖರ್, ಶಂಕರ್ ಬಸವರಾಜ್ ತನಿಖೆ ನಡೆಸುತ್ತಿರುವ ವೇಳೆ ಮತ್ತೊಂದು ರೈಲು ಹಾದು ಹೋಗಿದ್ದು ಕೂಡಲೇ ಬದಿಗೆ ಹಾರಿ ತಪ್ಪಿಸಿಕೊಂಡು ಪವಾಡ ಸದೃಶ ಪಾರಾಗಿದ್ದಾರೆ.
7 ದೇಶದ ಪ್ರವಾಸಿಗರಿಗೆ ಉಚಿತ ವೀಸಾ ಘೋಷಿಸಿದ ಶ್ರೀಲಂಕಾ, ಭಾರತೀಯರಿಗೂ ಇದೆಯೇ ಸೌಲಭ್ಯ?
ಚೆನ್ನೈನಲ್ಲಿ ಹಳಿ ತಪ್ಪಿದ ಉಪನಗರ ರೈಲು:
ಇಲ್ಲಿನ ಉಪನಗರ ರೈಲು ಸೇವೆಯ ಎಮು ರೈಲಿನ ಕೊನೆಯ ಮೂರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಚೆನ್ನೈನ ಹೊರವಲಯದ ಅವಧಿ ರೈಲು ನಿಲ್ದಾಣದಲ್ಲಿರುವ ಎಮು ಶೆಡ್‌ನಿಂದ ಬೆಳಗ್ಗೆ 5:40ರ ವೇಳೆಗೆ ರೈಲನ್ನು ಪ್ಲಾಟ್‌ಫಾರಂಗೆ ಹಾಕುವಾಗ ಘಟನೆ ಸಂಭವಿಸಿದೆ. ಪರಿಣಾಮ ಹಲವು ಉಪನಗರ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಯಿತು. ಜೊತೆಗೆ ಮೈಸೂರಿಗೆ ಹೊರಟಿದ್ದ ವಂದೇ ಭಾರತ್, ಶತಾಬ್ದಿ ಎಕ್ಸ್‌ಪ್ರೆಸ್, ಬೆಂಗಳೂರಿಗೆ ಹೊರಟಿದ್ದ ಬೃಂದಾವನ್ ಹಾಗೂ ಡಬಲ್‌ಡೆಕ್ಕರ್ ಎಕ್ಸ್‌ಪ್ರೆಸ್ ರೈಲುಗಳನ್ನು ಕೆಲಕಾಲ ನಿಲ್ಲಿಸಲಾಗಿತ್ತು. ಬಳಿಕ ರಕ್ಷಣಾ ಕಾರ್ಯ ಮುಕ್ತಾಯಗೊಂಡ ಬಳಿಕ ಎಂದಿನಂತೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.