Mysuru: ಅಪ್ರಾಪ್ತ ನಾದಿನಿಯನ್ನು ಗರ್ಭಿಣಿ ಮಾಡಿದವನಿಗೆ 25 ವರ್ಷ ಜೈಲು ಶಿಕ್ಷೆ

By Kannadaprabha News  |  First Published Dec 13, 2023, 7:03 AM IST

ಅಪ್ರಾಪ್ತ ವಯಸ್ಸಿನ ನಾದಿನಿಯನ್ನು ಗರ್ಭಿಣಿ ಮಾಡಿದ ವ್ಯಕ್ತಿಯೊಬ್ಬನಿಗೆ ಇಲ್ಲಿನ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮ ಖಮ್ರೋಜ್ ಅವರು ಮಂಗಳವಾರ 25 ವರ್ಷಗಳ ಕಠಿಣ ಸಜೆ ಹಾಗೂ ಒಂದು ಲಕ್ಷ ರು. ದಂಡ ವಿಧಿಸಿದ್ದಾರೆ. 


ಮೈಸೂರು (ಡಿ.13): ಅಪ್ರಾಪ್ತ ವಯಸ್ಸಿನ ನಾದಿನಿಯನ್ನು ಗರ್ಭಿಣಿ ಮಾಡಿದ ವ್ಯಕ್ತಿಯೊಬ್ಬನಿಗೆ ಇಲ್ಲಿನ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮ ಖಮ್ರೋಜ್ ಅವರು ಮಂಗಳವಾರ 25 ವರ್ಷಗಳ ಕಠಿಣ ಸಜೆ ಹಾಗೂ ಒಂದು ಲಕ್ಷ ರು. ದಂಡ ವಿಧಿಸಿದ್ದಾರೆ. ಮೈಸೂರು ತಾ.ದುದ್ದಗೆರೆ ಗ್ರಾಮದ ರಾಚಯ್ಯ ಎಂಬವರ ಪುತ್ರ ರಾಚಪ್ಪ ಶಿಕ್ಷೆಗೊಳಗಾದವನು. ಈತನಿಗೆ ವಿವಾಹವಾಗಿತ್ತು. ಅಡುಗೆ ಕೆಲಸ ಮಾಡುತ್ತಿದ್ದ ಈತ ಹೆಚ್ಚಾಗಿ ಮಾವನ ಮನೆಯಲ್ಲಿಯೇ ಇರುತ್ತಿದ್ದ.  ಅಪ್ರಾಪ್ತ ವಯಸ್ಸಿನ ನಾದಿನಿಯ ಜೊತೆ ಸಲುಗೆಯಿಂದಲೇ ಇರುತ್ತಿದ್ದ. 2022ರ ಮಾರ್ಚ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನಾದಿನಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ. 

ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದಾದ ನಂತರವೂ ಹಲವಾರು ಬಾರಿ ದೈಹಕಿ ಸಂಪರ್ಕ ಬೆಳೆಸಿದ್ದ. ಆಕೆ ಗರ್ಭಿಣಿಯಾಗಿದ್ದರಿಂದ ವಿಷಯ ಬಹಿರಂಗವಾಗಿ ಆಕೆಯ ತಾಯಿ ವರುಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.  ಈ ಬಗ್ಗೆ ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಸ್ವರ್ಣ ಅವರು ಆರೋಪಿಯ ವಿರುದ್ಧ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಈಗ ಆರೋಪ ಸಾಬೀತಾಗಿದೆ. ದಂಡದ ಮೊತ್ತದಲ್ಲಿ ಅಪ್ರಾಪ್ತ ನಾದಿನಿಗೆ 75 ಸಾವಿರ ರು. ನೀಡಬೇಕು ಎಂದಿರುವ ನ್ಯಾಯಾಧೀಶರು ಆಕೆ ಐದು ಲಕ್ಷ ರು. ಪರಿಹಾರಕ್ಕೆ ಅರ್ಹಳು ಎಂದಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂರ್ ಕೆ.ಬಿ. ಜಯಂತಿ ವಾದ ಮಂಡಿಸಿದ್ದರು.

Latest Videos

undefined

ಪ್ರಯಾಣಿಕರೇ ಗಮನಿಸಿ: ಬೆಂಗಳೂರು-ಮಂಗಳೂರು ರೈಲು ಸೇವೆ 1 ವಾರ ರದ್ದು!

ರೈತ ಆತ್ಮಹತ್ಯೆ: ಮೂವರಿಗೆ ಜೈಲು ಶಿಕ್ಷೆ: ಜಮೀನಿನ ಸೀಮೆಯ ಜಗಳದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಸಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಮೂವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 25 ಸಾವಿರ ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ. ದುಂಡಪ್ಪ ಗಿರಿಸಾಗರ, ಅಪ್ಪಣ್ಣ ಗಿರಿಸಾಗರ, ಯಲ್ಲವ್ವ ಅಪ್ಪಣ್ಣ ಗಿರಿಸಾಗರ ಶಿಕ್ಷೆಗೆ ಗುರಿಯಾದವರು. ನಾಗಠಾಣ ಗ್ರಾಮದ ಶರಣಪ್ಪ ಅರಕೇರಿ ಎಂಬಾತ 2017 ಅಕ್ಟೋಬರ್ 25ರಂದು ತನ್ನ ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. 

ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಏಕಾಏಕಿ ಡೆಂಘೀ ಕೇಸ್‌ ಹೆಚ್ಚಳ!

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ದಿನ ಶರಣಪ್ಪ ಜತೆಗೆ ಪಕ್ಕದ ಜಮೀನು ಮಾಲೀಕರಾದ ದುಂಡಪ್ಪ ಗಿರಿಸಾಗರ, ಅಪ್ಪಣ್ಣ ಗಿರಿಸಾಗರ, ಯಲ್ಲವ್ವ ಅಪ್ಪಣ್ಣ ಗಿರಿಸಾಗರ ಇವರು ಜಗಳ ತೆಗೆದು ಮಾನಸಿಕ ಕಿರುಕುಳ ನೀಡಿದ್ದರು ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪಿಎಸ್‍ಐ ಸುರೇಶ ಗಡ್ಡಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶಿವಾಜಿ ಅನಂತ ನಾಲವಡೆ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಪ್ರಧಾನ ಅಭಿಯೋಜಕ ಎಸ್.ಎಚ್.ಹಕೀಂ ವಾದ ಮಂಡಿಸಿದ್ದರು.

click me!