Mysuru: ಅರಣ್ಯ ಇಲಾಖೆ ವಶದಲ್ಲಿದ್ದ ಹಾಡಿಯ ವ್ಯಕ್ತಿ ಅನುಮಾನಾಸ್ಪದ ಸಾವು

By Govindaraj S  |  First Published Oct 13, 2022, 1:30 AM IST

ಅಕ್ರಮ ಜಿಂಕೆ ಮಾಂಸ ಸಾಗಣೆ ಪ್ರಕರಣದ ವಿಚಾರಣೆ ವೇಳೆ ಅನುಮಾನಸ್ಪದವಾಗಿ ಆರೋಪಿ ಸಾವನ್ನಪ್ಪಿರುವ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಹೊಸಹಳ್ಳಿ ಹಾಡಿಯ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ತೀವ್ರವಾಗಿ ಪ್ರತಿರೋಧಿಸಿದ್ದಾರೆ.


ಸರಗೂರು (ಅ.13): ಅಕ್ರಮ ಜಿಂಕೆ ಮಾಂಸ ಸಾಗಣೆ ಪ್ರಕರಣದ ವಿಚಾರಣೆ ವೇಳೆ ಅನುಮಾನಸ್ಪದವಾಗಿ ಆರೋಪಿ ಸಾವನ್ನಪ್ಪಿರುವ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಹೊಸಹಳ್ಳಿ ಹಾಡಿಯ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ತೀವ್ರವಾಗಿ ಪ್ರತಿರೋಧಿಸಿದ್ದಾರೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನ ಗುಂಡ್ರೆ ಅರಣ್ಯ ವ್ಯಾಪ್ತಿಯ ಹೊಸಹಳ್ಳಿ ಹಾಡಿಯಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ಸಾಗಣೆ ಆರೋಪದಡಿಯಲ್ಲಿ ಕರಿಯಪ್ಪ ಎಂಬ ವ್ಯಕ್ತಿಯನ್ನು ಹಿಡಿದು ವಿಚಾರಣೆ ನೆಪದಲ್ಲಿ ಗುಂಡ್ರೆ ಅರಣ್ಯ ವಲಯದ ಕಚೇರಿಗೆ ಕರೆದೊಯ್ದಿದ್ದರು. 

ಅರಣ್ಯ ಇಲಾಖೆ ವಶದಲ್ಲಿದ್ದ ಕರಿಯಪ್ಪ ಕಳೆದ ರಾತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇದು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿರುವ ಹಿಂಸೆ ಮತ್ತು ಹಲ್ಲೆಯಿಂದ ಮೃತ ಪಟ್ಟಿದ್ದಾರೆ ಎಂದು ಇವರ ತಾಯಿ ದೂರು ನೀಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಯಾರು ಇರಲಿಲ್ಲ ಎಂದು  ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು ಅಂತರಸಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಆದಿವಾಸಿಗರು ಮಾತ್ರ ತೀವ್ರ ಆಕ್ರೋಶ ಹೊರಹಾಕುತ್ತಿದ್ದು ಪ್ರಕರಣದ ತನಿಖೆಗೆ ಒತ್ತಾಯಿಸಿದ್ದಾರೆ.

Tap to resize

Latest Videos

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು: ನೇಣಿಗೆ ಶರಣಾದ ತಾಯಿ ಜೈಲು ಸೇರಿದ ಅಪ್ಪ

ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು: ಹರಿದು ಬಿದ್ದ ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೆ ಮೃತಪಟ್ಟಘಟನೆ ಮಂಗಳವಾರ ಸಂಜೆ ತಾಲೂಕಿನ ಅರಳೇಶ್ವರ ಗ್ರಾಮದ ಹೊಲದಲ್ಲಿ ಸಂಭವಿಸಿದೆ. ತಾಲೂಕಿನ ಅರಳೇಶ್ವರ ಗ್ರಾಮದ ಪ್ರಭುಲಿಂಗ ಚನ್ನಪ್ಪ ಹಂಚಿನಮನಿ (42) ಮೃತಪಟ್ಟದುರ್ದೈವಿ. ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಗೆ ತೆರಳಿದಾಗ ಈ ಘಟನೆ ಸಂಭವಿಸಿದೆ. ಈ ಕುರಿತು ಆಡೂರು ಪೊಲೀಸ್‌ ಠಾಣೆಯಲ್ಲಿ ಮೃತನ ಸಹೋದರ ಗಿರೀಶ ಹಂಚಿನಮನಿ ಹೆಸ್ಕಾಂನ ಮೂವರು ಸಿಬ್ಬಂದಿ ಮೇಲೆ ದೂರು ದಾಖಲಿಸಿದ್ದು, ಆಡೂರು ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬುಧವಾರ ಬೆಳಗ್ಗೆ ಹಾನಗಲ್ಲ ತಾಲೂಕು ಆಸ್ಪತ್ರೆಯ ಹತ್ತಿರ ಅರಳೇಶ್ವರ ಗ್ರಾಮದ ಗ್ರಾಮಸ್ಥರು ಜಮಾಯಿಸಿ, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಪದೇ ಪದೇ ವಿದ್ಯುತ್‌ ತಂತಿಗಳು ಹರಿದು ಬೀಳುತ್ತಿರುವ ಕುರಿತು ಹಲವಾರು ಬಾರಿ ದೂರು ನೀಡಿದ್ದರೂ ವಿದ್ಯುತ್‌ ತಂತಿಗಳನ್ನು ಬದಲಾಯಿಸಿಲ್ಲ. ಈಗ ಇಂತಹ ದುರಂತವಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಬೆಂಗ್ಳೂರಲ್ಲಿ ಭಾರೀ ಮಳೆ: ಬಿಲ್ಡಿಂಗ್ ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ

ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎಸ್‌.ಎಸ್‌. ಜಿಂಗಾಡೆ, ತಾಲೂಕಿನಲ್ಲಿ ಇಂತಹ ವಿದ್ಯುತ್‌ ತಂತಿಗಳನ್ನು ಬದಲಾಯಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಮಗಾರಿ ಮಂಜೂರಾದ ತಕ್ಷಣ ಹೊಸ ತಂತಿಗಳನ್ನು ಅಳವಡಿಸಲಾಗುವುದು ಎಂದ ಅವರು, ಮೃತರ ಎಲ್ಲ ವಿವರಗಳನ್ನು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಇಲಾಖೆಯಿಂದ ಬರುವ ಪರಿಹಾರ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

click me!