
ಜೈಪುರ: ರಾಜಸ್ಥಾನದ ಬಾರಮೇರ್ ಜಿಲ್ಲೆಯ ಯುವತಿ ತನ್ನ ಪ್ರಿಯಕರನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕರೆ ಮಾಡಿ ಪ್ರಿಯಕರನನ್ನು ಮನೆಗೆ ಕರೆಸಿಕೊಂಡ ಯುವತಿ, ಕುಟುಂಬಸ್ಥರ ಜೊತೆ ಕೋಲು-ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾಳೆ. ಹಲ್ಲೆಯ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಂತರ ಶವವನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ, ಕೊಲೆ ಸಂಬಂಧ ಯುವತಿ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಬಾಲಮೇರ್ ಜಿಲ್ಲೆಯ ಬಾಲತೋರ ಕ್ಷೇತ್ರದ ಸಿಂಧರಿ ಇಲಾಖೆಯ ಕೋಶಲು ಎಂಬಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಶನಿವಾರ ಬೆಳಗ್ಗೆ ಸುಮಾರು 6.30ಕ್ಕೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಹೋದರೆ ಅಲ್ಲಿ ಯಾರೂ ಇರಲಿಲ್ಲ. ನಂತರ ಅಪರಿಚಿತ ಯುವಕನ ಶವವೊಂದು ಆಸ್ಪತ್ರೆಯಲ್ಲಿದೆ ಎಂದು ಪೊಲೀಸರಿಗೆ ಮಾಹಿತಿ ಬಂದಿದೆ. ಪೊಲೀಸರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಶವ ತಂದವರು ಅಲ್ಲಿಂದ ಎಸ್ಕೇಪ್ ಆಗುವಲ್ಲಿ ಯಶಸ್ವಿಯಾಗಿದ್ದರು.
ಪೊಲೀಸರು ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕೆಲವರು ವಾಹನವೊಂದರಲ್ಲಿ ಶವ ತಂದಿರೋದು ಸೆರೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ಆಧರಿಸಿ ಯುವಕನ ಗೆಳತಿ ಜೆಠಿ, ಚುನ್ನಿದೇವಿ, ಚೌಥಾರಾಮ್, ತಾಜಾಯರಾಮ್, ಖೋರಾಜರಾಮ್ ಮತ್ತು ಮನಾರಾಮ್ ಎಂಬವರನ್ನು ಬಂಧಿಸಿದ್ದಾರೆ.
ಬ್ಲೂಫಿಲಂ ನೋಡಿ, ಪಕ್ಕದಲ್ಲೇ ಮಲಗಿದ್ದ 9 ವರ್ಷದ ತಂಗಿ ಬಾಯಿ ಮುಚ್ಚಿ 13ರ ಅಣ್ಣನಿಂದ ರೇಪ್; ಮಗನಿಗೆ ತಾಯಿ ಸಾಥ್!
ಪೊಲೀಸರನ್ನು ಎಲ್ಲರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆಗ ಯುವತಿ ಜೆಠಿ, ಮೃತ ಯುವಕನ ಜೊತೆ ಹಲವು ದಿನಗಳಿಂದ ಅಕ್ರಮ ಸಂಬಂಧ ಹೊಂದಿದ್ದಳು ಎಂಬ ವಿಷಯವನ್ನು ಬಾಯಿಬಿಟ್ಟಿದ್ದಾರೆ. ಶುಕ್ರವಾರ ಸಂಜೆ ಪ್ರಿಯಕರ ಮಗಾರಾಮನಿಗೆ ಫೋನ್ ಮಾಡಿದ ಜೆಠಿ ತನ್ನೂರಿಗೆ ಕರೆಸಿಕೊಂಡಿದ್ದಾಳೆ. ಗೆಳತಿ ಬಳಿ ಹೋಗುವ ಮುನ್ನ ಕುಟುಂಬಸ್ಥರಿಗೆ ಕೆಲಸದ ನಿಮಿತ್ತ ಹೊರಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದನು. ರಾತ್ರಿ ಸುಮಾರು ಒಂದು ಗಂಟೆಗೆ ಯುವಕ ಮನೆಗೆ ಬರುತ್ತಿದ್ದಂತೆ ಯುವತಿಯ ಪೋಷಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
ಹಲ್ಲೆ ವೇಳೆ ಯುವಕನಿಗೆ ಮೂತ್ರ ಕುಡಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ನಮಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಕೊಲೆಗೆ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಎಸ್‌ಪಿ ಕುಂದನ್ ಕವರಿಯಾ ಮಾಹಿತಿ ನೀಡಿದ್ದಾರೆ.
ಸಾಫ್ಟ್‌ವೇರ್ ಕೆಲಸ ಸಿಕ್ಕಿದ ಖುಷಿಯಲ್ಲಿ ಪಾರ್ಟಿ ಕೊಟ್ಟ ಗೆಳತಿಯನ್ನೇ ಸಾಮೂಹಿಕ ಅತ್ಯಾಚಾರ ಮಾಡಿದ ಸ್ನೇಹಿತರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ