ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಹಾವೇರಿಯಲ್ಲಿ ಬಂಧನ

By Kannadaprabha News  |  First Published Nov 7, 2024, 5:35 AM IST

ನಟ ಸಲ್ಮಾನ್‌ ಖಾನ್‌ಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ಹೆಸರಲ್ಲಿ ಜೀವ ಬೆದರಿಕೆ ಒಡ್ಡಿದ ಜೊತೆಗೆ 5 ಕೋಟಿ ರು.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಮುಂಬೈ/ಹಾವೇರಿ (ನ.07): ನಟ ಸಲ್ಮಾನ್‌ ಖಾನ್‌ಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ಹೆಸರಲ್ಲಿ ಜೀವ ಬೆದರಿಕೆ ಒಡ್ಡಿದ ಜೊತೆಗೆ 5 ಕೋಟಿ ರು.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವನ್ನು ಬೆನ್ನತ್ತಿದ ಮುಂಬೈನ ವರ್ಲಿ ಪೊಲೀಸರು, ಕರ್ನಾಟಕಕ್ಕೆ ಆಗಮಿಸಿ ಮಂಗಳವಾರ ರಾತ್ರಿ ಹಾವೇರಿಯಲ್ಲಿದ್ದ ಆರೋಪಿ ಭಿಕಾರಾಂ ಜಲರಾಂ ಬಿಷ್ಣೋಯಿಯನ್ನು ಬಂಧಿಸಿದ್ದಾರೆ. ಈತ ರಾಜಸ್ಥಾನದ ಜಾಲೋರ್‌ ಮೂಲದವ. ಈತನನ್ನು ವಶಕ್ಕೆ ಪಡೆದು ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ವಿಚಾರಣೆ ಮೇರೆಗೆ ಮುಂಬೈಗೆ ಕರೆದೊಯ್ದಿದ್ದಾರೆ.

Tap to resize

Latest Videos

undefined

ಆರೋಪಿಯು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಸೋದರನ ಹೆಸರಿನಲ್ಲಿ ಮುಂಬೈ ಟ್ರಾಫಿಕ್‌ ಪೊಲೀಸರಿಗೆ ವಾಟ್ಸಪ್‌ನಲ್ಲಿ ಬೆದರಿಕೆ ಹಾಕಿದ್ದ. ‘ಕೃಷ್ಣಮೃಗ ಕೊಂದಿದ್ದಕ್ಕೆ ಬಿಷ್ಣೋಯಿ ಸಮಾಜದ ಕ್ಷಮೆ ಕೇಳು, ಇಲ್ಲವೇ 5 ಕೋಟಿ ರು. ಹಣ ನೀಡು’ ಎಂದು ಸಂದೇಶ ಕಳುಹಿಸಿದ್ದ. ಬಳಿಕ ಸಂದೇಶ ಬಂದಿದ್ದು ಕರ್ನಾಟಕದಿಂದ ಎಂದು ಪೊಲೀಸರಿಗೆ ತನಿಖೆ ವೇಳೆ ಗೊತ್ತಾಗಿತ್ತು.

ಸಿದ್ದುಗೆ ತಾಕತ್ತಿದ್ದರೆ ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಯಡಿಯೂರಪ್ಪ ಸವಾಲು

ಕೂಲಿ ಕೆಲಸಕ್ಕೆಂದು ಬಂದಿದ್ದ: ಬಂಧಿತ ಆರೋಪಿ ಭಿಕಾರಾಂ ಒಂದೂವರೆ ತಿಂಗಳ ಹಿಂದೆ ಕೂಲಿಕಾರ್ಮಿಕನಾಗಿ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ನಂತರ ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

click me!