
ಮಂಡ್ಯ (ಜು.12): ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ 2ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ, ಒಂದು ಲಕ್ಷ ರು. ದಂಡ ವಿಧಿಸಿ ತೀರ್ಪು ನೀಡಿದೆ.
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಲೇ.ಚಿಕ್ಕಣ್ಣ ಪುತ್ರ ಶಿವಣ್ಣ (50) ಶಿಕ್ಷೆಗೆ ಗುರಿಯಾದವರು.
ಅಪರಾಧಿಯು ಕಳೆದ 2023ರ ಡಿಸೆಂಬರ್ 11ರಂದು ಅದೇ ಗ್ರಾಮದ ಮನೆ ಬಳಿ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದನು.
ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೆ.ಆರ್.ಸಾಗರ ಠಾಣೆಯಲ್ಲಿ ಅಂದಿನ ಪಿಎಸ್‌ಐ ಬಸವರಾಜು ಅಪರಾಧಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ವೃತ್ತ ನಿರೀಕ್ಷಕರಾಗಿದ್ದ ಟಿ.ಎಂ.ಪುನೀತ್ ಅವರು ತನಿಖೆ ನಡೆಸಿ ಅಪರಾಧಿ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 2ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ದಿಲೀಪ್ ಕುಮಾರ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಶಿವಣ್ಣನಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರು. ತೀರ್ಪು ನೀಡಿದ್ದಾರೆ. ಪ್ರಕರಣದ ಕುರಿತು ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ