
ಮಂಡ್ಯ (ಮೇ.4) : ಬಾಲಕಿಯೊಬ್ಬಳ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಅಪರಾಧಿಗೆ ಮಂಡ್ಯದ ಪೋಕ್ಸೋ ವಿಶೇಷ ನ್ಯಾಯಾಲಯ 8 ವರ್ಷ ಸಜೆ ಮತ್ತು50 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ.
ಕೆ.ಆರ್.ಪೇಟೆ ತಾಲೂಕು ಶ್ರವಣಹಳ್ಳಿ ಗ್ರಾಮದ ರಾಮಕೃಷ್ಣ (34) ಶಿಕ್ಷೆಗೊಳಗಾದ ಅಪರಾಧಿ. ಈತ ಆರು ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿ ತೀವ್ರತರವಾದ ಲೈಂಗಿಕ ಹಲ್ಲೆ ನಡೆಸಿದ್ದನು. ಈತನ ವಿರುದ್ಧ ಪೋಕ್ಸೊ ಕಾಯ್ದೆ ದಾಖಲಿಸಿ ಅಂದಿನ ಕಿಕ್ಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಲಿಂಗ ಬಾನಸಿ ತನಿಖೆ ನಡೆಸಿದ್ದರು. ನಂತರ ಸಬ್ ಇನ್ಸ್‌ಪೆಕ್ಟರ್ ರೇವತಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿಂದ ಆರೋಪಿ ಎಸಗಿದ ಕೃತ್ಯ ಸಾಬೀತಾಗಿದ್ದರಿಂದ ಪೋಕ್ಸೋ ಕಾಯಿದೆ ಕಲಂ 363 354 ಎ), ಐಪಿಸಿ ಹಾಗೂ ಕಲಂ-10ರ ಪೋಕ್ಸೋ ಕಾಯಿದೆ ಅಪರಾಧಗಳಿಗೆ ಕಲಂ 363 ಐಪಿಸಿಗೆ 3 ವರ್ಷಗಳ ಸಾದಾ ಸಜೆ, 1 ಸಾವಿರ ರು. ದಂಡ, ಕಲಂ 354 (ಎ) ಐಪಿಸಿ ಮತ್ತು ಕಲಂ ೧೦ರ ಪೋಕ್ಸೋ ಕಾಯಿದೆ ಅಪರಾಧಕ್ಕೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 5 ಸಾವಿರ ರು. ದಂಡ, ನೊಂದ ಬಾಲಕಿಗೆ 50೦ ಸಾವಿರ ರು. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಎಂ.ಜೆ.ಪೂರ್ಣಿಮಾ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ