Mandya; ಹಳೇ ದ್ವೇಷಕ್ಕೆ ಹಲ್ಲೆ, ಚಿಕಿತ್ಸೆ ಫಲಿಸದೆ 12 ದಿನದ ಬಳಿಕ ಯುವಕನ ಮೆದುಳು ನಿಷ್ಕ್ರಿಯ

Published : Oct 22, 2022, 01:27 PM IST
Mandya; ಹಳೇ ದ್ವೇಷಕ್ಕೆ ಹಲ್ಲೆ, ಚಿಕಿತ್ಸೆ ಫಲಿಸದೆ 12 ದಿನದ ಬಳಿಕ ಯುವಕನ ಮೆದುಳು ನಿಷ್ಕ್ರಿಯ

ಸಾರಾಂಶ

ಹಳೇ ದ್ವೇಷ ಹಿನ್ನೆಲೆ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ 12 ದಿನದ ಬಳಿಕ ಯುವಕನ ಮೆದುಳು ನಿಷ್ಕ್ರಿಯಗೊಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.

ವರದಿ : ನಂದನ್ ರಾಮಕೃಷ್ಣ, ಏಷ್ಯಾನೆಟ್ ಸುವರ್ಣ ನ್ಯೂಸ್, 

ಮಂಡ್ಯ (ಅ.22): ಹಳೇ ದ್ವೇಷ ಹಿನ್ನೆಲೆ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ 12 ದಿನದ ಬಳಿಕ ಯುವಕನ ಮೆದುಳು ನಿಷ್ಕ್ರಿಯ ಗೊಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಸಚಿನ್ ಹಲ್ಲೆಗೆ ಒಳಗಾಗಿದ್ದರು. ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ಸಚಿನ್ ಊರ ಹಬ್ಬಕ್ಕಾಗಿ ಮಲ್ಲನಾಯಕನಹಳ್ಳಿ ಗ್ರಾಮಕ್ಕೆ ಕೆಲ ದಿನಗಳ ಹಿಂದೆ ಬಂದಿದ್ದಾರೆ. ಅಕ್ಟೋಬರ್ 10 ರಂದು ಸಚಿನ್ ಅಣ್ಣನ ಬಾಮೈದ ರಾಜು ಮತ್ತು ಸ್ನೇಹಿತರು ಸಚಿನ್ ಹತ್ಯೆಗೆ ಯತ್ನಿಸಿದ್ದಾರೆ. ರಾಜು ಹಾಗೂ ಆತನ ಸ್ನೇಹಿತರಾದ ಆಕಾಶ್, ನಿತಿನ್ ಎಂಬುವರು ರಾತ್ರಿ ವೇಳೆ ಅಟ್ಯಾಕ್ ಮಾಡಿ ಸಚಿನ್ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದರು. ಹಲ್ಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಶಂಕಿಸಲಾಗಿದೆ. ಸ್ಥಳೀಯರ ನೆರವಿನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನ ಚಿಕಿತ್ಸೆ ಬಳಿಕ ಸಚಿನ್‌ರನ್ನು ಮಂಡ್ಯ ಮಿಮ್ಸ್ ಗೆ ರವಾನೆ ಮಾಡಲಾಗಿತ್ತು. 12 ದಿನದ ಬಳಿಕ ಹಲ್ಲೆಗೊಳಗಾದ ಸಚಿನ್ ಮೆದುಳು ನಿಷ್ಕ್ರಿಯ ವಾಗಿದೆ.

ನೋವಿನಲ್ಲೂ ಸಾರ್ಥಕ ಕಾರ್ಯಕ್ಕೆ ಮುಂದಾದ ಪೋಷಕರು: ಹಲ್ಲೆಗೊಳಗಾಗಿದ್ದ ಸಚಿನ್ ಮಂಡ್ಯದ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆ ನಡೆದ 12 ದಿನಗಳ ಬಳಿಕ ಸಚಿನ್ ಮೆದುಳು ನಿಷ್ಕ್ರಿಯಗೊಂಡಿದೆ. ಬ್ರೈನ್ ಡೆಡ್ ಬಳಿಕ ಮಗನ ಅಂಗಾಂಗ ದಾನಕ್ಕೆ ನಿರ್ದಾರ ಮಾಡಿದ ತಂದೆ ಲಿಂಗರಾಜು‌. ದೇಹ ಸುಟ್ಟು ಬೂದಿಯಾಗುವ ಬದಲು ನಾಲ್ಕು ಜನಕ್ಕೆ ಅನುಕೂಲವಾಗಲಿ ಎಂದು ಈ ನಿರ್ಧಾರ ಮಾಡಿದ್ದಾರೆ. ಅಂಗಾಂಗ ದಾನ ಮಾಡಲು ಮಿಮ್ಸ್ ನಿಂದ ಬೆಂಗಳೂರಿನ ಆಸ್ಪತ್ರೆಗೆ ಗಾಯಾಳು ಸಚಿನ್‌ರನ್ನು ರವಾನೆ ಮಾಡಲಾಗಿದೆ.

Belagavi: ಪತಿ ಸಾವಿನಿಂದ ಮನನೊಂದು ಒಂದೂವರೆ ವರ್ಷದ ಮಗಳ ಹತ್ಯೆಗೈದು ಪತ್ನಿ ನೇಣಿಗೆ

ಘಟನೆ ನಡೆದು 12 ದಿನ ಕಳೆದ್ರೂ ಆರೋಪಿಗಳನ್ನ ಬಂಧಿಸದ ಪೊಲೀಸರು: ಸಚಿನ್ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾದ ಬಳಿಕ ಮಂಡ್ಯದ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಆರೋಪಿಗಳ ಫೋಟೋ ಸಹಿತ ಮಾಹಿತಿ ನೀಡಿದ್ರು ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಘಟನೆ ನಡೆದು 12 ದಿನ ಕಳೆದರೂ ಆರೋಪಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಪೊಲೀಸರ ನಿರ್ಲಕ್ಷ್ಯತೆಗೆ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದು, ಮಗ ದುಸ್ಥಿತಿಗೆ ಕಾರಣವಾದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Koppal: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿ: 10 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!