Mangaluru: ಕಿಸ್ಸಿಂಗ್ ವೀಡಿಯೋ ಜಾಡು ಹಿಡಿದ ಪೊಲೀಸರಿಗೆ ವಿದ್ಯಾರ್ಥಿಗಳ ಬೆತ್ತಲು ವೀಡಿಯೋ ಲಭ್ಯ!

Published : Jul 21, 2022, 12:48 PM ISTUpdated : Jul 21, 2022, 01:05 PM IST
Mangaluru: ಕಿಸ್ಸಿಂಗ್ ವೀಡಿಯೋ ಜಾಡು ಹಿಡಿದ ಪೊಲೀಸರಿಗೆ ವಿದ್ಯಾರ್ಥಿಗಳ ಬೆತ್ತಲು ವೀಡಿಯೋ ಲಭ್ಯ!

ಸಾರಾಂಶ

ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ.

ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ‌ಮಂಗಳೂರು

ಮಂಗಳೂರು (ಜು.21): ಇದು ನಿಜಕ್ಕೂ ಕಾಲೇಜಿಗೆ ಮಕ್ಕಳನ್ನ ಕಳುಹಿಸೋ ಪೋಷಕರು ಬೆಚ್ಚಿ ಬೀಳೋ ಸುದ್ದಿ. ತಮ್ಮ ಮಕ್ಕಳು ಕಾಲೇಜಿಗೆ ಹೋಗಿ ನೆಮ್ಮದಿಯಾಗಿ ಮನೆ ಸೇರ್ತಾರೆ ಅಂತ ಅಂದುಕೊಂಡ್ರೆ ಎಲ್ಲಾ ವಿದ್ಯಾರ್ಥಿಗಳ ವಿಷಯದಲ್ಲಿ ಹಾಗಾಗಿರಲ್ಲ ಅನ್ನೋದಕ್ಕೆ ಮಂಗಳೂರಿನ ಪ್ರಿತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ವಿಡಿಯೋ ವೈರಲ್ ಪ್ರಕರಣ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ವಿಡಿಯೋ ಇದಾಗಿದ್ದು, ಹುಡುಗರ ಕೊಠಡಿಗೆ ತೆರಳಿ ಕಿಸ್ಸಿಂಗ್ ಸ್ಪರ್ಧೆ ಅನ್ನೋ ಹೆಸರಿನಲ್ಲಿ ಖುಲ್ಲಾಂಖುಲ್ಲಾ ಚುಂಬಿಸಿದ್ದರು. ಈ ವಿಡಿಯೋ ವೈರಲ್ ಆಗ್ತಾ ಇದ್ದಂತೆ ಅಲರ್ಟ್ ಆದ ಮಂಗಳೂರು ಸಿಸಿಬಿ ಪೊಲೀಸರು ವಿಡಿಯೋದ ಜಾಡು ಹಿಡಿದಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆತನ ವಿಚಾರಣೆ ನಡೆಸುತ್ತಿರುವಾಗಲೇ ಮತ್ತೊಂದು ವಿಡಿಯೋ ಪತ್ತೆಯಾಗಿದ್ದು, ಅದನ್ನೂ ಆತ ಸಾಮಾಜಿಕ ತಾಣಗಳಲ್ಲಿ ವೈರಲ್ ‌ಮಾಡಿರೋದು ಬೆಳಕಿಗೆ ಬಂದಿದೆ. 

Mangaluru: ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವೈರಲ್: ವಿಡಿಯೋ ಮಾಡಿದ ವಿದ್ಯಾರ್ಥಿ ವಶಕ್ಕೆ!

ಕಿಸ್ಸಿಂಗ್ ಸ್ಪರ್ಧೆ ‌ಹೆಸರಿನಲ್ಲಿ ಲಿಪ್ ಲಾಕ್ ಮಾಡಿದ ಬಳಿಕ ವಿದ್ಯಾರ್ಥಿನಿಯೊಬ್ಬಳು ವಿದ್ಯಾರ್ಥಿ ಜೊತೆಗೆ ಪೂರ್ತಿ ‌ನಗ್ನವಾಗಿ ಸೆಕ್ಸ್ ಮಾಡ್ತಿರೋ ವಿಡಿಯೋ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಸ್ಕೋದಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಉಳಿದ ವಿದ್ಯಾರ್ಥಿಗಳನ್ನ ಪತ್ತೆ ಮಾಡಿ ಬಂಧಿಸಲು ಸಿದ್ದತೆ ನಡೆಸಿದ್ದಾರೆ.

ಸೇತುವೆ ಮೇಲೆ ಡಿಯೋ ನಿಲ್ಲಿಸಿ, ನದಿಗೆ ಹಾರಿದ ತಾಲೂಕು ಪಂಚಾಯಿತಿ ಸದಸ್ಯನ ಪುತ್ರಿ

ಯೂನಿಫಾರಂನಲ್ಲಿದ್ದ ಮೂವರು ವಿದ್ಯಾರ್ಥಿನಿಯರು!: ಸದ್ಯ ಈ ವಿಡಿಯೋ ವೈರಲ್ ಆಗ್ತಿದ್ದಂತೆ ಖಾಸಗಿ ಕಾಲೇಜು ಆಡಳಿತ ಗಂಭೀರವಾಗಿ ಪರಿಗಣಿಸಿದೆ. ವಿಡಿಯೋದಲ್ಲಿ ಮೂವರು ಯುವಕರು ಮತ್ತು ಮೂವರು ವಿದ್ಯಾರ್ಥಿನಿಯರಿದ್ದು, ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ ಮತ್ತು ಐಡಿ ಕಾರ್ಡ್ ಸಹಿತ ಇದ್ದು, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. 20 ಸೆಕೆಂಡ್‌ಗಳ ಕಿಸ್ಸಿಂಗ್ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮತ್ತೊಂದು 51 ಸೆಕೆಂಡ್‌ಗಳ ಸೆಕ್ಸ್ ವಿಡಿಯೋ ಇದಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದ್ದು, ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ