ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು (ಸೆ.8): ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಪ್ರಕರಣದ A1 ಆರೋಪಿ ಆಯಿಷಾ @ ರೆಹಮತ್ ಸಹಿತ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ರೆಹಮತ್ ಪತಿ ಹಾಗು ಪ್ರಕರಣದ A5 ಆರೋಪಿ ಶೊಹೇಬ್ ಮತ್ತು ಸಿರಾಜ್ ಬಂಧನವಾಗಿದೆ. ಬಂಟ್ವಾಳದ ಕಲ್ಲಡ್ಕ ಬಳಿ ರೆಹಮತ್ ಳನ್ನು ಬಂಧಿಸಿದ್ದಾರೆ.
ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ A2 ಆರೋಪಿ ಅಬ್ದುಲ್ ಸತ್ತಾರ್ ಗಾಗಿ ಶೋಧ ಕಾರ್ಯಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ 6 ಜನರ ಮೇಲೆ ಕಾವೂರು ಠಾಣೆಯಲ್ಲಿ ಎಫ ಐ ಆರ್ ದಾಖಲಾಗಿದೆ. ಸದ್ಯ ಮಹಿಳೆ ರೆಹಮತ್, ಆಕೆಯ ಪತಿ ಶೋಹೆಬ್ ಹಾಗೂ ಸಿರಾಜ್ ಬಂಧನವಾಗಿದೆ.
undefined
ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ಮೃತದೇಹ ಕೊನೆಗೂ ಪತ್ತೆ!
ಪ್ರಕರಣದ ಹಿನ್ನೆಲೆ: ಕೂಳೂರು ಸೇತುವೆ ಪಕ್ಕ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ ಮೃತದೇಹ ಮಂಗಳವಾರ ಬೆಳಗ್ಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಮ್ತಾಜ್ ಅಲಿ ಅವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಕೃಷ್ಣಾಪುರದ ಮಹಿಳೆ ರೆಹಮತ್ , ಆಕೆಯ ಪತಿ ಸೇರಿದಂತೆ ಆರು ಮಂದಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಕೃಷ್ಣಾಪುರದ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್ ಎಂಬಾಕೆಯೇ ಪ್ರಕರಣದ ಮಾಸ್ಟರ್ ಮೈಂಡ್. ಮುಮ್ತಾಜ್ ಅಲಿಗೆ ನಿರಂತರ ಬೆದರಿಕೆ, ಹಣದ ಬೇಡಿಕೆ ಇಟ್ಟಿದ್ದ ಈಕೆಯ ಪತಿ ಶೋಯೆಬ್ ಕೂಡ ಸಾಥ್ ನೀಡಿದ್ದ. ಜತೆಗೆ ಕಾಟಿಪಳ್ಳ ಬೊಳ್ಳಾಜೆಯ ಅಬ್ದುಲ್ ಸತ್ತಾರ್, ಬಂಟ್ವಾಳ ಸಜಿಪಮುನ್ನೂರು ನಿವಾಸಿ ಖಲಂದರ್ ಶಾಫಿ, ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಮುಸ್ತಫಾ, ಇದೇ ಊರಿನ ಮೊಹಮ್ಮದ್ ಸಿರಾಜ್ ಸಲಾಂ ಎಂಬವರ ಮೇಲೂ ಪ್ರಕರಣ ದಾಖಲಾಗಿದೆ.
ಸಮಂತಾ ಬಗ್ಗೆ ಹೊಸ ವಿಷಯ ಬಿಚ್ಚಿಟ್ಟ ಶೋಭಿತಾ ಧೂಳಿಪಾಲ, ಆಕೆಯ ಮದುವೆ ದಿನ ಕಣ್ಣೀರಾದೆ ಎಂದ ನಟಿ
ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮುಮ್ತಾಜ್ ಅವರು ಕೃತ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ಹೆಸರಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಆಡಿಯೊ ಸಂದೇಶ ಕಳುಹಿಸಿದ್ದರು.
ವಿದ್ಯಾಸಂಸ್ಥೆ ಮಾತ್ರವಲ್ಲದೆ ವಿವಿಧ ಉದ್ಯಮಗಳನ್ನು ಹೊಂದಿದ್ದ ಮುಮ್ತಾಜ್ ಅಲಿ ಸಾಮಾಜಿಕ, ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದರು. ಪ್ರಥಮ ಆರೋಪಿ ಆಯಿಷಾ ರೆಹಮತ್, ಇತರರ ಜತೆ ಸೇರಿ ವ್ಯವಸ್ಥಿತವಾಗಿ ಹನಿಟ್ರಾಪ್ ನಡೆಸಿದ್ದೇ ಮುಮ್ತಾಜ್ ಸಾವಿಗೆ ಕಾರಣವಾಗಿದೆ.