ಬಂಟ್ವಾಳ: ಹುಲಿವೇಷ ಟೀಂ ಸಂಘರ್ಷ, ಮೂವರಿಗೆ ಚೂರಿ ಇರಿತ!

By Ravi Janekal  |  First Published Oct 27, 2023, 4:38 PM IST

ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದ್ದು, ಹುಲಿವೇಷ ಟೀಂ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ‌ ನಡೆದಿದೆ.


ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು

ಮಂಗಳೂರು (ಅ.27): ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದ್ದು, ಹುಲಿವೇಷ ಟೀಂ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ‌ ನಡೆದಿದೆ.

Tap to resize

Latest Videos

ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಮಂಗಳೂರು ಕಮಿಷನರ್ ಫೋಟೋ ಬಳಸಿ ಹಣಕ್ಕೆ ಡಿಮ್ಯಾಂಡ್: ನಕಲಿ ಖಾತೆ ವಿರುದ್ದ ಎಚ್ಚರ!

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ , ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೇ ಚೂರಿಯಿಂದ ಇರಿದಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಏನಿದು ಹುಲಿವೇಷ ಟೀಂ ಸಂಘರ್ಷ?
   
ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಚೂರಿ ಇರಿತದವರೆಗೆ ಮುಂದುವರಿದಿದೆ. ಕೆಲ ವರ್ಷಗಳ ಹಿಂದೆ ಜೊತೆಯಾಗಿಯೇ ಹುಲಿವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿತ್ತು. ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತಿದೆ. 

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ ಚೂರಿಯಿಂದ ಇರಿದು ಪರಾರಿಯಾಗಿದೆ.

ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

click me!