Mangaluru: ಲಂಚ ಸ್ವೀಕರಿಸುವಾಗ ಟ್ರ್ಯಾಪ್: ಗ್ರಾಮ ಕರಣಿಕನಿಗೆ ಜೈಲು ಶಿಕ್ಷೆ!

By Govindaraj SFirst Published Mar 3, 2023, 1:00 AM IST
Highlights

ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಎಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಮಂಗಳೂರು (ಮಾ.03): ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಎಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಆರೋಪಿ ಗ್ರಾಮ ಕರಣಿಕ ಮಹೇಶ್‌ಗೆ ಜೈಲು ಶಿಕ್ಷೆ ವಿಧಿಸಿ ನ್ಯಾ. ಬಿ.ಬಿ. ಜಕಾತಿ ತೀರ್ಪು ನೀಡಿದ್ದಾರೆ. 4 ವರ್ಷಗಳ ಸಾದಾ ಸಜೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ. ಆರೋಪಿಯು ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 8 ತಿಂಗಳ ಕಾಲ ಸಾದಾ ಸಜೆಗೆ ಆದೇಶ ಮಾಡಲಾಗಿದೆ.‌ 

2016ರ ಜೂ‌.7ರಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ದಾಳಿ ನಡೆಸಿತ್ತು. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಗ್ರಾಮಕರಣಿಕನಾಗಿದ್ದ ಮಹೇಶ್, ಗೋಪಾಲಕೃಷ್ಣ ಎಂಬವರ ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ 60 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ 45 ಸಾವಿರವನ್ನು ಲಂಚದ ಹಣವಾಗಿ ಸ್ವೀಕರಿಸುವ ಸಮಯ ಟ್ರ್ಯಾಪ್ ಮಾಡಲಾಗಿತ್ತು. ಕಲಂ 7, 13(1) (ಡಿ) ಜೊತೆಗೆ 13(2) ಭ್ರಷ್ಟಾಚಾರ ತಡೆ ಕಾಯ್ದೆ, 1988 ರೀತಿಯ ಪ್ರಕರಣ ದಾಖಲಾಗಿತ್ತು. 

Udupi: ಮನೆ ಕಳ್ಳತನ ಪ್ರಕರಣ: ಹದಿಹರೆಯದ ಆರೋಪಿಗಳ ಬಂಧನ

ಸದರಿ ಪ್ರಕರಣದಲ್ಲಿ ಪ್ರಕರಣದ ತನಿಖೆಯನ್ನು ದಿನಕರ ಶೆಟ್ಟಿ, ಪೊಲೀಸ್ ನಿರೀಕ್ಷಕರು, ಇವರು ಕೈಗೊಂಡು, ಯೋಗೀಶ್ ಕುಮಾರ್, ಎಸಿಬಿ ಪೊಲೀಸ್ ನಿರೀಕ್ಷಕರು, ಪೊಲೀಸ್ ಠಾಣೆ ಮಂಗಳೂರು ಇವರು ತನಿಖೆಯನ್ನು ಮುಂದುವರಿಸಿ ಆರೋಪಿಯ ವಿರುದ್ಧ ಘನ 3ನೇ ಹೆಚ್ಚುವರಿ ಜಿಲ್ಲಾ ಸತ್ತ ಮತ್ತು ವಿಶೇಷ ನ್ಯಾಯಾಲಯ, ಮಂಗಳೂರು ಇಲ್ಲಿಗೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ರವೀಂದ್ರ ಮುನ್ನಿಸಾಡಿ, ವಿಶೇಷ ಸಾರ್ವಜನಿಕ ಅಭಿಯೋಜಕರು, Baaris ಲೋಕಾಯುಕ್ತ ಮಂಗಳೂರು ಇವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

click me!