
ದಕ್ಷಿಣ ಕನ್ನಡ (ಜೂ.19): ಅಕ್ಕನ ಮಗನೆಂದು ಎಸ್‌ಎಸ್‌ಎಲ್‌ಸಿ ಬಾಲಕನನ್ನು ಮನೆಯಲ್ಲಿ ಇಟ್ಟುಕೊಂಡರೆ, ಆತನೇ ಆಸರೆ ಕೊಟ್ಟ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ವಿರೋಧಿಸಿದ್ದಕ್ಕೆ ಕೋಪಗೊಂಡು ಚಿಕ್ಕಮ್ಮಳನ್ನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಬಳಿ ನಡೆದಿದೆ.
ಹೌದು, ಸಾಮಾನ್ಯವಾಗಿ ಅಕ್ಕ-ತಂಗಿ ಬಾಂಧವ್ಯದ ಹಿನ್ನೆಲೆಯಲ್ಲಿ ಅಕ್ಕನ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಮಗನನ್ನು ಹೇಮಾವತಿ ಮನೆಯಲ್ಲಿ ಇರಿಸಿಕೊಂಡಿದ್ದಾಳೆ. ಆದರೆ, ಅಕ್ಕನ ಮಗ ಓದುವ ಬಾಲಕನಾಗಿದ್ದರಿಂದ ಆತ ತನ್ನ ಮೇಲೆ ಕಣ್ಣು ಹಾಕಿದ್ದಾನೆ ಎಂಬ ಅರಿವೂ ಆಕೆಗಿರಲಿಲ್ಲ. ಸಾಮಾನ್ಯ ದಿನಗಳಂತೆ ಹೇಮಾವತಿ ಊಟ ಮುಗಿಸಿ ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದಾರೆ. ತಡರಾತ್ರಿ ಆಗುತ್ತಿದ್ದಂತೆ ಬಾಲಕ ಚಿಕ್ಕಮ್ಮನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತನ ಅತ್ಯಚಾರ ಯತ್ನಕ್ಕೆ ವಿರೋಧಿಸಿ ಕೆನ್ನೆಗೆ ಒಂದು ಬಾರಿಸಿ ಕಳಿಸಿದ್ದಾಳೆ. ಜೊತೆಗೆ, ಹುಡುಗ ಬುದ್ಧಿಯಿಂದ ಹೀಗೆ ಮಾಡುತ್ತಿದ್ದಾನೆ ಎಂದು ಅರಿತು ಮನೆಯ ಇತರೆ ಸದಸ್ಯರನ್ನು ಎಬ್ಬಿಸದೇ ಸುಮ್ಮನೆ ಮಲಗಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಧಾರವಾಡ ಮೂಲದ ಯೋಧ!
ಆದರೆ, ಬೆಳಗಾದರೆ ತನ್ನ ಬಗ್ಗೆ ಚಿಕ್ಕಮ್ಮ ಎಲ್ಲರೆದುರು ಅತ್ಯಾಚಾರ ಯತ್ನದ ಬಗ್ಗೆ ಹೇಳಿ ಮರ್ಯಾದೆ ಕಳೆಯುತ್ತಾಳೆ ಎಂದು ಹೆದರಿಕೊಂಡು ರಾತ್ರಿ ಮಲಗಿದ್ದ ಚಿಕ್ಕಮ್ಮನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬೆಳಗ್ಗೆ ಎಷ್ಟೇ ಹೊತ್ತಾದರೂ ಹೇಮಾವತಿ ಹಾಸಿಗೆಯಿಂದ ಎದ್ದೇಳದ ಹಿನ್ನೆಲೆಯಲ್ಲಿ ಮನೆಯವರು ಎಬ್ಬಿಸಲು ಮುಂದಾಗಿದ್ದಾರೆ. ಆಗ ಹಾಸಿಗೆಯಲ್ಲಿಯೇ ಸಾವನ್ನಪ್ಪಿರುವುದು ಖಚಿತವಾಗಿದೆ. ಆಗ ಬಾಲಕ ಚಿಕ್ಕಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಮನೆಯವರನ್ನು ನಂಬಿಸಿ ಅಂತ್ಯಕ್ರಿಯೆ ಮಾಡುವಂತೆ ಸಲಹೆ ನೀಡಿದ್ದಾನೆ.
ಹಾಸಿಗೆಯಲ್ಲೇ ಸಾವನ್ನಪ್ಪಿದ್ದ ಹೇಮಾವತಿ: ಈ ದುರ್ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬಿಳಿಯೂರು ಬಳಿ ನಡೆದಿದೆ. ಕೊಲೆಯಾದ ಮಹಿಳೆ ಹೇಮಾವತಿ(37) ಆಗಿದ್ದಾಳೆ. ಜೂ.16ರಂದು ಬಿಳಿಯೂರಿನ ಮನೆಯಲ್ಲಿ ಹೇಮಾವತಿ ಅಕ್ಕನ ಮನೆಯಲ್ಲಿಯೇ ಮೃತದೇಹವಾಗಿ ಪತ್ತೆಯಾಗಿದ್ದಾಳೆ. ಇನ್ನು ಪೊಲೀಸರಿಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಇದಾದ ನಂತರ ಪೊಲೀಸರು ಮಹಿಳೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮರಣೋತ್ತರ ಪರೀಕ್ಷೆಗೆ ಶವ ರವಾನಿಸಿದ್ದಾರೆ.
ಬೆಕ್ಕಿಗೆ ಹಾಲು ಹಾಕಲು ಕೊಟ್ಟಿದ್ದ ಕೀ ಬಳಸಿ ಚಿನ್ನ ಕದ್ದವನ ಬಂಧನ
ಮರಣೋತ್ತರ ಪರೀಕ್ಷೆ ವೇಳೆ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನು ಆಧರಿಸಿ ಕೊಲೆಯ ಘಟನೆಯನ್ನು ಬೇಧಿಸಿದಾಗ ಮನೆಯಲ್ಲಿದ್ದ ಅಕ್ಕನ ಮಗನೇ ಅತ್ಯಚಾರಕ್ಕೆ ಯತ್ನಿಸಿ ವಿರೋಧಿಸಿದಾಗ ಕೊಲೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ. ಈ ಘಟನೆಯ ಕುರಿತು ಕೊಲೆ ಮಾಡಿದ 10ನೇ ತರಗತಿ ಅಭ್ಯಾಸ ಮಾಡುತ್ತಿದ್ದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮೃತ ಹೇಮಾವತಿ ಅವರ ಗಂಡ ವಿಠಲ ಪೈ ಅವರ ದೂರಿನಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ