ಉತ್ತರ ಪ್ರದೇಶದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಕಾಲ್ತುಳಿ, ಸಾವಿನ ಸಂಖ್ಯೆ 60ಕ್ಕೆ ಏರಿಕೆ!

By Chethan KumarFirst Published Jul 2, 2024, 5:14 PM IST
Highlights

ಭೋಲೆ ಬಾಬಾ ಅವರ ಧಾರ್ಮಿಕ ಸತ್ಸಂಗ ಕಾರ್ಯಕ್ರಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಆರಂಭದಲ್ಲಿ 27 ಸಾವು ವರದಿಯಾಗಿದ್ದರೆ. ಇದೀಗ ಸಾವಿನ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ಹಥ್ರಾಸ್(ಜು.02) ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ಆಯೋಜಿಸಿದ್ದ ಭೋಲೆ ಬಾಬಾ ಅವರ ಧಾರ್ಮಿಕ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಸಂಭವಿಸಿದೆ. ಇದರ ಪರಿಣಾಮ ಕಾಲ್ತುಳಿತ ಸಂಭವಿಸಿ ಮೂವರು ಮಕ್ಕಳು, 23 ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿದ್ದರು. ಆದರೆ ಭೀಕರ ಘಟನೆಯಲ್ಲಿ ಗಾಯಗೊಂಡು ಇದೀಗ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಸದ್ಯದ ಮಾಹಿತಿ ಪ್ರಕಾರ ಕಾಲ್ತುಳಿತದಲ್ಲಿ 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ರತಿಭಾನಪುರದಲ್ಲಿ ಶಿವನ ಹೆಸರಿನಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. 

ಘಟನೆ ಕುರಿತು ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಪೊಲೀಸರ ಬಳಿ ಘಟನೆ ವರದಿ ಕೇಳಿದ್ದಾರೆ. ಇತ್ತ ಆಸ್ಪತ್ರೆಯಲ್ಲಿ ಶವಗಳ ರಾಶಿ ತುಂಬಿದೆ. ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. 

Latest Videos

ಮಥುರಾ ದೇವಸ್ಥಾನದಲ್ಲಿ ಲಡ್ಡು ಹೋಳಿ ಹಬ್ಬ ಆಚರಣೆ, ಕಾಲ್ತುಳಿತಕ್ಕೆ 6 ಮಂದಿಗೆ ಗಂಭೀರ ಗಾಯ!

50ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಆಸ್ಪತ್ರೆ ದಾಖಲಾಗಿರುವ ಗಾಯಗಳುಗಳ ಕುರಿತು ಮೆಡಿಕಲ್ ಆಫೀಸರ್ ಡಾ.ಉಮೇಶ್ ಕುಮಾರ್ ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರ ದಾಖಲಿಸಲಾಗಿದೆ. ಈ ಪೈಕಿ 27 ಮಂದಿ ಆಸ್ಪತ್ರೆ ದಾಖಿಸುವ ಮೊದಲೇ ಮೃತಪಟ್ಟಿದ್ದಾರೆ. ಭೀಕರ ಘಟನೆ ಇದಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಮೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ.

ಮತೃತಪಟ್ಟವರ ಪೈಕಿ ಮೂವರು ಮಕ್ಕಳು, 23 ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ಹಥ್ರಾಸ್‌ನಲ್ಲಿ ನಡೆದ ಘಟನೆ ತೀವ್ರ ನೋವುಂಟು ಮಾಡಿದೆ. ಘಟನೆಯಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸ್ಥಳೀಯ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಘಟನೆಯಲ್ಲಿ ಸಂಕಷ್ಟಕ್ಕೆ ಸಿಲುಕಿದವರರು, ಮಡಿದವರ ಕುಟುಂಬ, ಗಾಯಾಳುಗಳ ರಕ್ಷಣೆಗೆ ಸೂಚಿಸಲಾಗಿದೆ. ಸಚಿವರಾದ ಲಕ್ಷ್ಮಿನಾರಾಣಯ ಚೌಧರಿ ಹಾಗೂ ಸಂದೀಪ್ ಸಿಂಗ್ ಸ್ಥಳದಲ್ಲಿದ್ದಾರೆ. ಮುಖ್ಯ ಕಾರ್ಯದರ್ಸಿ ಹಾಗೂ ಪೊಲೀಸ್ ಡಿಜಿಪಿ ಕೂಡ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಆಗ್ರ ಎಡಿಜಿ ನೇತೃತ್ವದಲ್ಲಿ ಘಟನೆ ತನಿಖೆಗೆ ಆದೇಶಿಸಲಾಗಿದೆ.  ಈ ಸಂದರ್ಭದಲ್ಲಿ ಭಗವಾನ್ ಶ್ರೀರಾಮ ಆಪ್ತರನ್ನು ಕಳೆದುಕೊಂಡ ಕುಟುಂಬಕ್ಕೆ ಧೈರ್ಯ ನೀಡಲಿ. ಗಾಯಾಳುಗಳು ಶೀಘ್ರವಾಗಿ ಚೇತರಿಸಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. 

ಕೇರಳ ವಿವಿಯಲ್ಲಿ ನಿಕಿತಾ ಗಾಂಧಿ ಕಾರ್ಯಕ್ರಮದ ವೇಳೆ ಕಾಲ್ತುಳಿತ, ನಾಲ್ಕು ಸಾವು

click me!