
ದೊಡ್ಡಬಳ್ಳಾಪುರ(ಸೆ.21): ತಾಲೂಕಿನ ರಾಮಯ್ಯನಪಾಳ್ಯದಲ್ಲಿರುವ ಸಿಮೆಂಟ್ ರೆಡಿ ಮಿಕ್ಸ್ ಪ್ಲಾಂಟ್ ನಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಅಡಿ ಎತ್ತರದ ಗಾಂಜಾ ಗಿಡವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗಾಂಜಾ ಗಿಡ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಮುನಿಕೃಷ್ಣ ಹಾಗೂ ಸಿಬ್ಬಂದಿ ಅಂದಾಜು 2.5 ಲಕ್ಷ ಮೌಲ್ಯದ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.
ಹಾಸನ: ಕೈದಿಗಳಿಗೆ ಸೇಬು, ಮೂಸಂಬಿಯಲ್ಲಿ ಗಾಂಜಾ ನೀಡುತ್ತಿದ್ದ ಮೂವರ ಸೆರೆ
ಸಿಮೆಂಟ್ ರೆಡಿ ಮಿಕ್ಸ್ ಪ್ಲಾಂಟ್ ಮಾಲೀಕರಾದ ಮಾದೇವ, ಮಧು (40), ಚಾಲಕ ಬಿಸ್ಟುಲ್ಲಾ ಶೇಖ್ (31) ವಿರುದ್ಧ ಪ್ರಕರಣ ದಾಖಲಾಗಿದೆ. ಚಾಲಕ ಬಿಸ್ಟುಲ್ಲಾ ಶೇಖ್ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ