ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡಿಕೊಂಡಿದ್ದ 4 ತಿಂಗಳ ಗರ್ಭಿಣಿ ಮಹಿಳೆ ಅನುಮಾನಾಸ್ಪದ ಸಾವು!

By Ravi Janekal  |  First Published Jul 13, 2024, 12:37 PM IST

ಮೈಸೂರು ಮೂಲದ ವಿವಾಹಿತೆ ಮಹಿಳೆಯೊರ್ವಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.


ಬೆಳಗಾವಿ (ಜು.13): ಮೈಸೂರು ಮೂಲದ ವಿವಾಹಿತೆ ಮಹಿಳೆಯೊರ್ವಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಮಂಜುಳಾ(22) ಮೃತ ದುರ್ದೈವಿ, ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಮೃತ ಮಹಿಳೆ. ಒಂದೂವರೆ ವರ್ಷದ ಹಿಂದೆ ಇನ್‌ಸ್ಟಾಗ್ರಾಂ ಮೂಲಕ ಬೆಳಗಾವಿಯ ಮಚ್ಛೆ ಮೂಲದ ಬಾಳೇಶ ಎಂಬಾತನ ಪರಿಚಯವಾಗಿತ್ತು. ಬೆಳಗಾವಿ ಜಿಲ್ಲೆಯ ಉದ್ಯಮಭಾಗದ ಕೈಗಾರಿಕೆ ಪ್ರದೇಶದಲ್ಲಿ ಕೆಲಸ ಮಾಡ್ತಿದ್ದ ಬಾಳೇಶ. ಬಾಳೇಶ-ಮಂಜುಳಾ ಇಬ್ಬರು ಇನ್ಸ್‌ಟಗ್ರಾಮ ಮೂಲಕ ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿತ್ತು, ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದಕ್ಕೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಮನೆಯವರ ವಿರೋಧದ ನಡುವೆಯೂ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಬಳಿಕ ಬಾಳೇಶನ ಜೊತೆಗೆ ಬೆಳಗಾವಿಯಲ್ಲಿ ವಾಸವಾಗಿದ್ದ ಮೃತ ಮಹಿಳೆ. ನಾಲ್ಕು ತಿಂಗಳ ಗರ್ಭಿಣಿಯಾಗಿರುವಾಗಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.  ಎರಡು ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Tap to resize

Latest Videos

undefined

ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು!

ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಅರೋಪಿಸಿರುವ ಮಹಿಳೆಯ ಪೋಷಕರು. ಗಂಡನ ಕಿರುಕುಳ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಳಾ? ಅಥವಾ ಉಸಿರುಗಟ್ಟಿಸಿ ಕೊಂದು ಬಳಿ ನೇಣುಬಿಗಿದನಾ ಪತಿ? ಸದ್ಯ ಘಟನೆ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ವಿಚಾರಣೆ ಮುಂದುವರಿಸಿದ್ದಾರೆ.

click me!