ರಾಮನಗರ: ಕೌಟುಂಬಿಕ ಕಲಹ, ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

By Girish Goudar  |  First Published Oct 29, 2022, 2:06 PM IST

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೂಂತೂರು ಗ್ರಾಮದಲ್ಲಿ ನಡೆದ ಘಟನೆ 


ರಾಮನಗರ(ಅ.29):  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡೊಕೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ದೂಂತೂರು ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. ದೂಂತುರು ಗ್ರಾಮ ಪಲ್ಲವಿ(23) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ.  ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ಶವ ಹೊರತೆಗೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ 

Tap to resize

Latest Videos

ಕೋಲಾರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾದ ಘಟನೆ ಕೋಲಾರ ತಾಲೂಕಿನ ಭಟ್ರಹಳ್ಳಿ  ಕೆರೆಯಲ್ಲಿ ಇಂದು ನಡೆದಿದೆ. ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 
ಸ್ಥಳಕ್ಕೆ ಕೋಲಾರ ಎಸ್ಪಿ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾನ್‌ಸ್ಟೇಟೇಬಲ್‌ ಮೇಲೆ ಪೆಪ್ಪರ್‌ ಸ್ಪ್ರೇ ಮಾಡಿ ಡ್ರ್ಯಾಗರಿಂದ ಹಲ್ಲೆಗೈದ ರೌಡಿ

ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು

ಉತ್ತರ ಕನ್ನಡ: ಸಮುದ್ರದಲ್ಲಿ ಮುಳುಗಿ ಪ್ರವಾಸಿಗನೊಬ್ಬ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯಕಡಲತೀರದ ರುದ್ರಪಾದ ಬಳಿ ಇಂದು ನಡೆದಿದೆ.  ಅಭಿಷೇಕ್(29) ಎಂಬಾತನೇ ಮೃತಪಟ್ಟ ಪ್ರವಾಸಿಗನಾಗಿದ್ದಾನೆ. 

ಬೆಂಗಳೂರು ಮೂಲದ ಅಭಿಷೇಕ್ ಖಾಸಗಿ ಕಂಪೆನಿ ಉದ್ಯೋಗಿಯಾಗಿದ್ದ ಅಂತ ತಿಳಿದು ಬಂದಿದೆ. ನಾಲ್ವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳಿಗೆ ಸಿಲುಕಿ ಅಭಿಷೇಕ್ ಸಾವನ್ನಪ್ಪಿದ್ದಾನೆ. 

ಮುಳುಗಿದ್ದವನನ್ನು ರಕ್ಷಿಸಲು ಲೈಫ್‌ಗಾರ್ಡ್ ಸಿಬ್ಬಂದಿ ಮುಂದಾಗಿದ್ದರು. ಆದರೆ, ಅದಾಗಲೇ ನೀರಲ್ಲಿ ಮುಳುಗಿ ಅಭಿಷೇಕ್ ಕೊನೆಯುಸಿರೆಳೆದಿದ್ದನು. ಸ್ಥಳಕ್ಕೆ ಗೋಕರ್ಣ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 
 

click me!