
ಸಿಂಧನೂರು(ಫೆ.19): ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್‌ನೋಟ್ ಬರೆದಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಬುಧವಾರ ಜರುಗಿದೆ. ನಗರದ ಶರಣಬಸವೇಶ್ವರ ಕಾಲೊನಿಯ ನಿವಾಸಿ ವೀಣಾ (28) ಮೃತ ದುರ್ದೈವಿ.
ಶರಣಪ್ಪ ಎಂಬಾತನ ಜೊತೆ 2013ರಲ್ಲಿ ಈಕೆಯ ವಿವಾಹವಾಗಿತ್ತು. ಮದುವೆ ನಂತರ ತನ್ನ ಜೀವನದಲ್ಲಿ ಖುಷಿ ಸಿಕ್ಕಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗದಗ: ಬ್ಲೇಡ್‌ನಿಂದ ಬೇಕಾಬಿಟ್ಟಿ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವೈದ್ಯ
ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್ ವಶಕ್ಕೆ ಪಡೆದಿರುವ ಸಬ್‌ಇನ್ಸ್‌ಪೆಕ್ಟರ್ ವಿಜಯಕೃಷ್ಣ ತನಿಖೆ ಕಾರ್ಯ ಚುರುಕುಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ