ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮದುವೆ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ಮರಳುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಬೆಳಗಾವಿ (ಫೆ.22): ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮದುವೆ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ಮರಳುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ನಂದಗಡ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದೆ.
ಕಲಬುರಗಿಯಲ್ಲಿ ಅಪ್ರಾಪ್ತರ ಲವ್, ಪ್ರೀತಿ ನಿರಾಕರಿಸಿದ್ದಕ್ಕೆ 10ನೇ ತರಗತಿ ಬಾಲಕಿ ಕತ್ತು ಕೊಯ್ದ 9ನೇ ಕ್ಲಾಸ್ ಹುಡುಗ!
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ದುರ್ಘಟನೆ ನಡೆದಿದ್ದು, ಒಂದೇ ಕುಟುಂಬದ ಐವರು ಸೇರಿ ಆರು ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರೋ ಕಾರು ಆದ ಕಾರಣ ಇನ್ನೂ ಮೃತರ ಮಾಹಿತಿ ತಿಳಿದುಬಂದಿಲ್ಲ. ಮೃತರೆಲ್ಲರೂ ಧಾರವಾಡ ನಗರದ ಲಂಗೋಟಿ ಬಡಾವಣೆಯ ನಿವಾಸಿಗಳಾಗಿದ್ದಾರೆ.
Hassan ಕಾಲೇಜು ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ, ವಾರ್ಡನ್ ಕಾರಣವೆಂದು ಪೋಷಕರ ದಾಂಧಲೆ
ಧಾರವಾಡದಿಂದ ಕಿತ್ತೂರು ಮಾರ್ಗವಾಗಿ ಖಾನಾಪುರ ತಾಲೂಕಿನ ಗೋಳಿಹಳ್ಳಿ ಗ್ರಾಮಕ್ಕೆ ಕುಟುಂಬದವರೆಲ್ಲ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿ ಮರಳಿ ಬರುತ್ತಿರುವಾಗ ಈ ದುರ್ಘಟನೆ ನಡೆದಿದೆ. ಒಂದೇ ಕಾರಿನಲ್ಲಿ 10 ಜನರ ಪ್ರಯಾಣ ಮಾಡುತ್ತಿದ್ದರು. ಆರು ಜನ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ.
ಕಾರು ಚಾಲಕ ಶಾರುಖ್ ಪೆಂಡಾರಿ (30), ಇಕ್ಬಾಲ್ ಜಮಾದಾರ್ (50), ಸಾನಿಯಾ ಲಂಗೋಟಿ(37) ಉಮರಾ ಬೇಗಂ ಲಂಗೋಟಿ (17) ಶಬುನಂ ಲಂಗೋಟಿ (37), ಫರಾನ್ ಲಂಗೋಂಟಿ (13) ಮೃತ ದುದೈವಿಗಳಾಗಿದ್ದಾರೆ. ಇನ್ನು ಕಾರಿನಲ್ಲಿದ್ದ ಫರಾತ್ ಬೆಟಗೇರಿ (18) ಸೂಫಿಯಾ ಲಂಗೋಟಿ (22) ಸಾನಿಯಾ ಜಾಮದಾರ್ 36) ಮಾಹೀಂ ಲಂಗೋಟಿ (7) ಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.