ಹುಬ್ಬಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ, ಸ್ಪಾರ್ಕರ್ ಉತ್ಪಾದನಾ ಕಾರ್ಖಾನೆಯಲ್ಲಿ ಅವಘಡ, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸ, ಸಾವು ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾದ್ಯತೆ
ಹುಬ್ಬಳ್ಳಿ, (ಜುಲೈ.23): ಹುಬ್ಬಳ್ಳಿ ಹೊರ ವಲಯದಲ್ಲಿರುವ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸಾವು ನೋವಿನ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ.
. ಹುಬ್ಬಳ್ಳಿ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಇರುವ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ತಬ್ಸುಮ್ ಎಂಬುವವರಿಗೆ ಸೇರಿದ ಸ್ಪಾರ್ಕರ್ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. 15 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಸಾವು ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾದ್ಯತೆ ಎನ್ನಲಾಗುತ್ತಿದೆ.
ನಿಮ್ಮ ಜಿಲ್ಲೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನು ಕೆಲ ಕಾರ್ಮಿರು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಪ್ರಾಣ ಉಳಿಸಿಕೊಳ್ಳಲು ಫ್ಯಾಕ್ಟರಿಯಿಂದ ಆಚೆ ಓಡಿ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಇನ್ನು ಕಿ ನಂದಿಸುವ ವೇಳೆ ಮತ್ತೆ ಸ್ಫೋಟವಾಗಿದೆ. ಇದೀಗ ಸ್ಥಳೀಯರ ಸಹಾಯದಿಂದ ಗಾಯಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಬಗ್ಗೆ ಇನ್ನುಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.