ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿವಮೊಗ್ಗ, (ಡಿ.23): ಇನ್ನೇನು ಇದು ಕೊನೆ ವರ್ಷ. ಈ ಒಂದು ವರ್ಷ ಮುಗಿದ್ರೆ ಡಾಕ್ಟರ್ ಆಗುತ್ತಿದ್ದರು. ಆದ್ರೆ, ಡಾಕ್ಟರ್ ಆಗೋಕೆ ಮುಂಚೆನೇ ಜಿಲ್ಲೆಯ ಮೆಡಿಕಲ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ (ಸಿಮ್ಸ್) ನಲ್ಲಿ ಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.
ಲಲಿತಾ(22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಲಲಿತಾ ಇಂದು (ಬುಧವಾರ) ಸಿಮ್ಸ್‌ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆತ್ಮಹತ್ಯೆ
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹಾಸ್ಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಹಾಗೂ ಸಿಮ್ಸ್ ವೈದ್ಯಾಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಶುರುವಾಗಿದೆ.