* ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಘಟನೆ
* ಹುಟ್ಟಿದಾಗಿನಿಂದ ಮಾನಸಿಕ ಅಸ್ವಸ್ಥನಾಗಿದ್ದ ಬಸಪ್ಪ
* ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿಗ್ಗಾಂವಿ(ಜು.18): ಮಾನಸಿಕ ಅಸ್ವಸ್ಥನೋರ್ವ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಂಚ್ಚಿಕೊಂಡು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿಗ್ಗಾಂವಿಯ ಬಸಪ್ಪ ಮುದಕಪ್ಪ ಘೋರ್ಪಡೆ (50) ಎಂದು ಗುರುತಿಸಲಾಗಿದೆ.
ಈತ ಹುಟ್ಟಿದಾಗಿನಿಂದ ಮಾನಸಿಕ ಅಸ್ವಸ್ಥನಾಗಿದ್ದು ಮತ್ತು ದನ ಕಾಯುವ ಕಾರ್ಯ ಮಾಡುತ್ತಿದ್ದ. ಆತನ ತಂದೆ ತೀರಿಕೊಂಡ ಬಳಿಕ ಅಣ್ಣನ ಜೊತೆಯಲ್ಲಿದ್ದ. ಜೊತೆಗೆ ಪಟ್ಟಣದ ವಿವಿಧ ಹೋಟೆಲ್‌ಗಳಲ್ಲಿ ಕೆಲಸ ಮಾಡಿ ಅಲ್ಲಿಯೇ ಮಲಗುತ್ತಿದ್ದ ಇತ್ತೀಚಿಗೆ ಮಾನಸಿಕ ಅಸ್ವಸ್ಥತೆ ಹೆಚ್ಚಾಗಿದ್ದರಿಂದ ತಾನೇ ಎಪಿಎಂಸಿಯ ಆವರಣದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನಪ್ಪಿದ್ದಾನೆ.
ಮಾಟಕ್ಕೆ ಹೆದರಿ ಇಬ್ಬರು ಮಕ್ಕಳ ಕೊಂದ ತಂದೆ, ರಕ್ತ ದೇವರಿಗೆ ಅರ್ಪಣೆ!
ಈತನ ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.