ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಹಾಗೂ ಶಾಸಕ ಗಾಲಿ ಜನಾರ್ಧನರೆಡ್ಡಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.
ಬೆಂಗಳೂರು (ಜೂ.13): ರಾಜ್ಯದಲ್ಲಿ ಬಳ್ಳಾರಿ ಗಣಿಧಣಿಗಳು ಇಡೀ ರಾಜಕಾರಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಘಟನೆ ಎಲ್ಲರಿಗೂ ನೆನಪಿದೆ. ಈಗ ಅದು ಇತಿಹಾಸವಾಗಿದ್ದರೂ, ಅಂದು ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಆರೋಪದಿಂದ ಹಲವು ರಾಜಕೀಯ ನಾಯಕರು ಹೊರಬರಲು ಸಾಧ್ಯವಾಗಿಲ್ಲ. ಈಗ 2015ರಲ್ಲಿ ದಾಖಲಾಗಿದ್ದ ಅಕ್ರಮ ಗಣಿಗಾರಿಕೆ ಕೇಸ್‌ಗೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಜನಾರ್ಧನರೆಡ್ಡಿ ಸೇರಿದಂತೆ ಒಟ್ಟು 10 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಜು.26ಕ್ಕೆ ವಿಚಾರಣೆ ಮುಂದೂಡಿಕೆ: ಅಕ್ರಮ ಗಣಿಗಾರಿಕೆ ಆರೋಪದಡಿ 2015ರಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ (Lokayukta SIT) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ 10 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಜೆ.ಪ್ರೀತ್ ಅವರಿಂದ ಸಮನ್ಸ್ ಜಾರಿಮಾಡಲಾಗಿದೆ. ಈ ಮೂಲಕ ವಿಚಾರಣೆಯನ್ನು ಜುಲೈ 26 ಕ್ಕೆ ಮುಂದೂಡಿಕೆ ಮಾಡಲಾಗಿದೆ.
undefined
ಹೊಂದಾಣಿಕೆ ರಾಜಕೀಯ ಬಿಜೆಪಿಯಲ್ಲಿಯೂ ಇದೆ : ಸಂಸದರ ಟೀಕೆ ಒಪ್ಪಿಕೊಂಡ ಸಿ.ಟಿ. ರವಿ
ಜೈಲು ಶಿಕ್ಷೆ ಅನುಭವಿಸಿ ಬಂದರೂ ಸಿಕ್ಕಿಲ್ಲ ಮುಕ್ತಿ: ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣ ಹಲವು ಜನಪ್ರತಿನಿಧಿಗಳಿಗೆ ಉರುಳಾಗಿತ್ತು. ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಆಸ್ತಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಜನಾರ್ಧನರೆಡ್ಡಿ ಅವರು ಜೈಲು ಶಿಕ್ಷೆಯನ್ನು ಅನುಭವಿಸಿ ಹೊರಗೆ ಬಂದಿದ್ದಾರೆ. ಈಗ ಜನಾರ್ಧನರೆಡ್ಡಿ ಹೊಸ ಪಕ್ಷವನ್ನು ಕಟ್ಟಿ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದಾರೆ. ಮತ್ತೊಂದೆಡೆ ಬಿ. ನಾಗೇಂದ್ರ ಕೂಡ ಗೆದ್ದು ಸಚಿವರಾಗಿ ಅಧಿಕಾರದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಇಬ್ಬರಿಗೂ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ.
ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್ ಆದೇಶ
ಪತ್ನಿ ಹೆಸರಲ್ಲಿರುವ ಆಸ್ತಿಯನ್ನು ಅಟ್ಯಾಚ್ ಮಾಡಿ: ಮತ್ತೊಂದು ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಶಾಕ್ ನೀಡಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಅಟ್ಯಾಚ್ ಮಾಡುವಂತೆ ಕೋರ್ಟ್ ಆದೇಶ ಮಾಡಿದೆ. ಅರುಣಾ ಲಕ್ಷ್ಮೀ ಹೆಸರಿನಲ್ಲಿರುವ 77ಕ್ಕೂ ಹೆಚ್ಚು ಆಸ್ತಿಯನ್ನು ಅಟ್ಯಾಚ್ ಮಾಡುವಂತೆ ಸೂಚಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಆದೇಶವನ್ನು ಹೊರಡಿಸಲಾಗಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಇದರಿಂದ ಇವರು ಆಸ್ತಿಯ ಮೇಲಿನ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ.