ಬಾಲಕಿ ರೇಪ್‌ ಮಾಡಿ ಸಾಕ್ಷ್ಯ ನಾಶ ಮಾಡಲು ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಕೊಂದ ಪಾಪಿಗಳು!

By BK Ashwin  |  First Published Aug 3, 2023, 5:08 PM IST

ಅಪ್ರಾಪ್ತ ಬಾಲಕಿಯ ಮೇಲೆ ಮೊದಲು ಅತ್ಯಾಚಾರ ಎಸಗಿ ನಂತರ ಅತ್ಯಂತ ಘೋರ ರೀತಿಯಲ್ಲಿ ಆಕೆಯನ್ನು ಕೊಲೆ ಮಾಡಿದ್ದಾರೆ. ಎಲ್ಲ ಸಾಕ್ಷ್ಯಗಳನ್ನು ಅಳಿಸಲು ಈ ಕೃತ್ಯ ನಡೆಸಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.


ಜೈಪುರ (ಆಗಸ್ಟ್ 3, 2023): ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ ಅಪರಿಚಿತ ಶಂಕಿತರು 14 ವರ್ಷದ ಬಾಲಕಿಯನ್ನು ಕೊಂದು ಕಲ್ಲಿದ್ದಲು ಕುಲುಮೆಯಲ್ಲಿ ಶವವನ್ನು ಸುಟ್ಟು ಹಾಕಿರುವ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಒಬ್ಬರಿಗಿಂತ ಹೆಚ್ಚು ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಗೆ ಸ್ಥಳೀಯ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಅವರೇ ಶಂಕಿತ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಮೊದಲು ಅತ್ಯಾಚಾರ ಎಸಗಿ ನಂತರ ಅತ್ಯಂತ ಘೋರ ರೀತಿಯಲ್ಲಿ ಆಕೆಯನ್ನು ಕೊಲೆ ಮಾಡಿದ್ದಾರೆ. ಎಲ್ಲ ಸಾಕ್ಷ್ಯಗಳನ್ನು ಅಳಿಸಲು ಈ ಕೃತ್ಯ ನಡೆಸಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹೇಯ ಕೃತ್ಯವು ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಕುಲುಮೆಯ ಸುತ್ತಲೂ ಇಳಿದು ಘಟನೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ.

Tap to resize

Latest Videos

ಇದನ್ನು ಓದಿ: Bengaluru Crime: ಯುವತಿ ಜತೆ ಲವ್ವಿಡವ್ವಿ: ಫ್ರೆಂಡ್ಸ್‌ ಜತೆ ಡ್ಯಾನ್ಸ್‌ ಟೀಚರ್‌ನಿಂದ ಗ್ಯಾಂಗ್‌ರೇಪ್‌!

ಘಟನಾ ಸ್ಥಳದಲ್ಲಿ ಎಫ್‌ಎಸ್‌ಎಲ್‌ ತಂಡಕ್ಕೆ ಸುಟ್ಟ ಬಳೆಯೊಂದು ಸಿಕ್ಕಿದ್ದು, ಬಹುಶ: ಇದು ಸಂತ್ರಸ್ತೆ ಬಾಲಕಿಯದ್ದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಮಧ್ಯೆ, ಹಿರಿಯ ಕಾಂಗ್ರೆಸ್ ನಾಯಕ ಧೀರಜ್ ಗುರ್ಜರ್ ಸ್ಥಳೀಯರನ್ನು ಭೇಟಿ ಮಾಡಿ ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದ್ದಾರೆ. ಶಾಂತಿಯುತವಾದ ಈ ಪ್ರದೇಶದಲ್ಲಿ ಇದುವರೆಗೆ ಸಂಭವಿಸಿದ ಅತ್ಯಂತ ಭೀಕರ ಘಟನೆ ಎಂದು ಅವರು ವಿವರಿಸಿದ್ದಾರೆ.

ಇನ್ನು, ಅಪರಾಧದಲ್ಲಿ ಭಾಗಿಯಾಗಿರುವ ಕೆಲವು ಶಂಕಿತರನ್ನು  ಬಂಧಿಸಿದ್ದೇವೆ ಎಂದು ಸ್ಥಳೀಯ ಪೊಲೀಸ್ ಮೂಲಗಳು ವರದಿ ಮಾಡಿವೆ. ಸ್ಥಳೀಯರು ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತಪಡಿಸಿದ್ದರೂ, ಅತ್ಯಾಚಾರ ನಡೆಸಿರುವುದು ಇನ್ನೂ ಸಾಬೀತಾಗಿಲ್ಲ.  ದೇಹವು ಗುರುತಿಸಲಾಗದಷ್ಟು ಸುಟ್ಟುಹೋಗಿದೆ ಮತ್ತು ಈ ಹಂತದಲ್ಲಿ ಏನನ್ನೂ ಪತ್ತೆ ಹಚ್ಚುವುದು ಕಷ್ಟ ಎಂದೂ ಪೊಲೀಸ್ ಮೂಲಗಳು ಅಸಹಾಯಕತೆ ವ್ಯಕ್ತಪಡಿಸಿವೆ. ಜಿಲ್ಲಾ ಎಸ್‌ಪಿ ಆದರ್ಶ್‌ ಸಿಧು ಸಹ ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನೂ ಈವರೆಗೆ ನೀಡಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತಂದೆಯ ಸಹೋದ್ಯೋಗಿಗಳಿಂದ ಅಪ್ರಾಪ್ತ ಸೋದರಿಯರ ಗ್ಯಾಂಗ್‌ ರೇಪ್: ಗರ್ಭಿಣಿಯಾದ ಬಾಲಕಿಯರು

ಇನ್ನೊಂದೆಡೆ, ಗ್ರಾಮಕ್ಕೆ ಆಗಮಿಸಿ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡ ಕಲುಲಾಲ್ ಗುರ್ಜರ್ ಅವರು ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ಆಕೆಯ ದೇಹವನ್ನು ಕುಲುಮೆಯಲ್ಲಿ ಸುಡಲಾಗಿದೆ ಎಂದು ಆರೋಪಿಸಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಹಾಗೂ, ಈ ಪ್ರಕರಣದಲ್ಲಿ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಳ್ಳಲಿಲ್ಲ ಮತ್ತು ಗ್ರಾಮಸ್ಥರು ಹಿಡಿದ ನಂತರವೇ ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದೂ ರಾಜಸ್ಥಾನದ ಬಿಜೆಪಿ ಮುಖಂಡ ಕಲುಲಾಲ್ ಗುರ್ಜರ್ ಆರೋಪಿಸಿದ್ದಾರೆ.

ಬೆಂಗಳೂರಲ್ಲಿ ಗ್ಯಾಂಗ್‌ರೇಪ್‌
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯೊಬ್ಬಳನ್ನು ಬ್ಲಾಕ್‌ಮೇಲ್ ಮಾಡಿ ಗ್ಯಾಂಗ್‌ ರೇಪ್‌ ಮಾಡಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ಹಲವು ಬಾರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡ್ಯಾನ್ಸ್‌ ಟೀಚರ್‌ ಜತೆಗೆ ಅತ್ಯಾಚಾರ ಮಾಡಿದ ಮತ್ತಿಬ್ಬರು ಆರೋಪಿಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಡೇಟಿಂಗ್ ಆ್ಯಪ್‌ನಲ್ಲಿ ಸ್ನೇಹ: ಮಹಿಳೆಗೆ ಮತ್ತು ಬರಿಸಿ ಗ್ಯಾಂಗ್‌ರೇಪ್‌; ಕೃತ್ಯ ಸೆರೆ ಹಿಡಿದ ಪಾಪಿಗಳು

ಸಂತ್ರಸ್ತೆಯ ಖಾಸಗಿ ಫೋಟೋಗಳನ್ನು ಸೆರೆ ಹಿಡಿದಿದ್ದ ಆರೋಪಿ ಆ್ಯಂಡಿ ಜಾರ್ಜ್‌, ಅದನ್ನು ಇಟ್ಕೊಂಡು ಬೆದರಿಕೆ ಹಾಕಿದ್ದಾನೆ. ಈ ಫೋಟೋಗಳನ್ನು ಡಿಲೀಟ್‌ ಮಾಡಲು ತನ್ನ ಸ್ನೇಹಿತರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆಯೂ ಒತ್ತಾಯಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಆರೋಪಿಯಿಂದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Love Jihad: ಹಿಂದೂ ಮಹಿಳೆಯೊಂದಿಗೆ ಫೇಸ್‌ಬುಕ್‌ ಲವ್‌: ರೇಪ್‌ ಮಾಡಿ ಗರ್ಭಪಾತ ಮಾಡಿಸಿ ಇಸ್ಲಾಂಗೆ ಮತಾಂತರ!

click me!