ಗದಗ: ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ 25 ವರ್ಷ ಜೈಲು

Published : Jun 26, 2023, 09:22 PM IST
ಗದಗ: ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ 25 ವರ್ಷ ಜೈಲು

ಸಾರಾಂಶ

ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಗದಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 25 ವರ್ಷ ಜೈಲು ಹಾಗೂ ₹50 ಸಾವಿರ ದಂಡ ವಿಧಿಸಿದೆ.

ಗದಗ (ಜೂ.26): ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಗದಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 25 ವರ್ಷ ಜೈಲು ಹಾಗೂ ₹50 ಸಾವಿರ ದಂಡ ವಿಧಿಸಿದೆ.

ಸವದತ್ತಿ ತಾಲ್ಲೂಕಿನ ತೆರದಕೊಪ್ಪ ಗ್ರಾಮದ ಮೌಲಾಸಾಬ ದೊಡ್ಡಮನಿ(Moulasab dodmani) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಆರೋಪಿಯು 12 ವರ್ಷದ ಬಾಲಕಿ ಮನೆಗೆ ತೆರಳಿ ಆಕೆಗೆ ಜೀವ ಬೆದರಿಕೆ ಹಾಕಿ ಒತ್ತಾಯಪೂರ್ವಕವಾಗಿ ಸವದತ್ತಿ ತಾಲ್ಲೂಕಿನ ಮುನವಳ್ಳಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ಆಕೆಯನ್ನು ಬೈಕ್‌ನಲ್ಲಿ ಸಿಂದೋಗಿ ಕ್ರಾಸ್‌ ಬಳಿ ಇರುವ ಮನೆಗೆ ಕರೆದುಕೊಂಡು ಹೋಗಿ, ಪ್ರಜ್ಞೆ ತಪ್ಪಿಸುವ ಮಾತ್ರೆ ತಿನ್ನಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ಆಕೆ ಎಚ್ಚರಗೊಂಡ ನಂತರ ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಸಂಬಂಧ 2018ರಲ್ಲಿ ನರಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಮಂಗಳೂರು: ಅಪ್ರಾಪ್ತ ಬಾಲಕಿ ಅತ್ಯಾಚಾರ ನಡೆಸಿದ ಅಪರಾಧಿಗೆ ಜೈಲು ಶಿಕ್ಷೆ ತೀರ್ಪು

ಪೊಲೀಸ್‌ ಇನ್‌ಸ್ಪೆಕ್ಟರ್‌ ಶ್ರೀನಿವಾಸ ಸಿ. ಮೇಟಿ ಪ್ರಕರಣದ ತನಿಖೆ ನಡೆಸಿ, 27.07.2018ರಂದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿ ವಿಚಾರಣೆ ನಡೆದು ಆರೋಪಿ ಮಾಡಿದ ಅಪರಾಧ ಸಾಬೀತಾದ ಕಾರಣ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಅವರು ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ, ₹50 ಸಾವಿರ ದಂಡ ವಿಧಿಸಿ ಜೂನ್‌ 24ರಂದು ತೀರ್ಪು ನೀಡಿದ್ದಾರೆ. ದಂಡದ ಹಣ ಕೊಡಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

 

11 ವರ್ಷದ ಬಾಲಕಿಯ ಮೇಲೆ ನಾಲ್ವರ ಅತ್ಯಾಚಾರ, ಕ್ಲಾಸ್‌ಮೇಟ್‌ ಕೂಡ ಭಾಗಿ!

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಮರೇಶ ಉಮಾಪತಿ ಹಿರೇಮಠ ವಾದ ಮಂಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ