ಹಣಕ್ಕಾಗಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಪ್ರಕರಣ! ತಾಯಿ ಸೇರಿ ನಾಲ್ವರು ದೋಷಿ ಎಂದು ಕೋರ್ಟ್ ತೀರ್ಪು

By Ravi Janekal  |  First Published Mar 7, 2024, 8:01 PM IST

ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ್ದ ಕಾಫಿನಾಡಿನ ಪೋಕ್ಸೋ ಕೇಸ್ ನ ತೀರ್ಪು ಪ್ರಕಟವಾಗಿದೆ. ಅತ್ಯಂತ ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ. ಪ್ರಕರಣದ ಮುಖ್ಯ ಆರೋಪಿ ತಾಯಿ ಹಾಗೂ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ. 


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು (ಮಾ.7): ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ್ದ ಕಾಫಿನಾಡಿನ ಪೋಕ್ಸೋ ಕೇಸ್ ನ ತೀರ್ಪು ಪ್ರಕಟವಾಗಿದೆ. ಅತ್ಯಂತ ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ. ಪ್ರಕರಣದ ಮುಖ್ಯ ಆರೋಪಿ ತಾಯಿ ಹಾಗೂ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ. ಉಳಿದ 49ಜನರನ್ನು ನಿರ್ದೋಷಿಗಳು ಎಂದು ಪ್ರಕಟಿಸಿದೆ.

Latest Videos

undefined

ಏನಿದು ಪ್ರಕರಣ : 

2021ಜನವರಿ 30 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶೃಂಗೇರಿ ತಾಲೂಕಿನ ಗೋಚವಳ್ಳಿ ಸಮೀಪದ ಮನೆಯೊಂದರಲ್ಲಿ ಅಪ್ರಾಪ್ತ ಮಗಳನ್ನು ಮುಂದಿಟ್ಟು ಅಕ್ರಮ ವ್ಯವಹಾರ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಕ್ರಷರ್ ಮಾಲಿಕ ಹಾಗೂ ಕಾರ್ಮಿಕನ ಮೂಲಕ ಪ್ರಕರಣ ಬೆಳಕಿಗೆ ಬಂದಿತ್ತು. ಅಂದೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಮಣ್ಯ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 2020 ರಿಂದ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಳ್ಳಲಾಗಿತ್ತು. ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಕೀಚಕರು  ನಿರಂತರ ಅತ್ಯಾಚಾರ ನಡೆಸಿದರು ಎನ್ನುವ ಆರೋಪ ಕೇಳಿಬಂದಿತ್ತು. 

ಸಿದ್ದಗಂಗಾ ಮಠ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಂಡೆಪಾಳ್ಯದ 3 ಆರೋಪಿಗಳ ಬಂಧನ

ಪ್ರಕರಣದ ಎಳೆಹಿಡಿದು ತನಿಖೆ ನಡೆಸಿದ ಪೊಲೀಸರಿಗೆ ತಾಯಿಯೇ ಮುಖ್ಯ ಆರೋಪಿ ಎನ್ನುವುದು ಸಾಬೀತು ಆಗಿತ್ತು. ಶೃಂಗೇರಿಯ ಅಂದಿನ ವೃತ್ತ ನಿರೀಕ್ಷಕರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿತ್ತಲ್ಲದೆ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ಅಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯ ನಿರ್ವಹಿಸಿದ್ದ ಶೃತಿ ಪ್ರಕರಣ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ನಾಪತ್ತೆಯಾಗಿದ್ದ ಸರ್ಕಾರಿ ಶಾಲೆಯ 5ನೇ ಕ್ಲಾಸ್ ಬಾಲಕಿ ಶವ ಮೋರಿಯಲ್ಲಿ ಪತ್ತೆ

ದುರುಳ ತಾಯಿ ತಪ್ಪಿತಸ್ತೆ : 

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ದೋಷಿ ಎಂದು ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿ ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣವನ್ನು ಮಾರ್ಚ್ 11 ಕಾಯ್ದಿರಿಸಿ ಆದೇಶಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ತಾಯಿಯೇ ದೋಷಿ ಎಂದು ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.ಪ್ರಕರಣದಲ್ಲಿ 53 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. 49ಜನ ಆರೋಪಿಗಳನ್ನು ಖುಲಾಸೆಗೊಳಿಸಿ ನಾಲ್ವರು ತಪ್ಪಿತಸ್ಥರೆಂದು ಆದೇಶಿಸಲಾಗಿದೆ. ಪ್ರಕರಣದ ಸಂತ್ರಸ್ತ ಬಾಲಕಿ ತಾಯಿ ಒಳಗೊಂಡಂತೆ  ಮೂವರು ತಪ್ಪಿತಸ್ಥರೆಂದು ನ್ಯಾಯಾಲಯ ಆದೇಶಿದ್ದು, ಕಳೆದ ಮೂರು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಲಾಗಿತ್ತು

click me!