Suspicious Death: ಯುವಕನ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು

By Suvarna News  |  First Published Dec 12, 2021, 9:04 AM IST

*   ವಿಜಯಪುರ ನಗರದಲ್ಲಿ ನಡೆದ ಘಟನೆ
*   ಸಂಜು ಹುಲ್ಲೂರ ಎಂಬುವವನ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿ 
*   ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 
 


ವಿಜಯಪುರ(ಡಿ.12): ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ಬಾಲಕಿಯೊಬ್ಬಳು(Minor Girl) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ(Suspicious Death) ಘಟನೆ ನಗರದ ವಿಶ್ವೇಶ್ವರ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ವಿಶ್ವೇಶ್ವರ ನಗರದಲ್ಲಿರುವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆಯ ಶವ(Deadbody) ಪತ್ತೆಯಾಗಿದೆ.  ವಿಜಯಪುರ(Vijayapura) ನಗರದ ಹೊರ ಭಾಗದ ಯೋಗಾಪುರ ಕಾಲೋನಿಯ ಯುವಕ ಸಂಜು ಹುಲ್ಲೂರ(Sanju Hullur) ಎಂಬುವವನ ಜೊತೆಗೆ ಅಪ್ರಾಪ್ತ ಬಾಲಕಿ ವಾಸವಿದ್ದಳು ಎಂದು ತಿಳಿದು ಬಂದಿದೆ.

ಮೃತ ಅಪ್ರಾಪ್ತೆ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು(Student). ಯುವಕ ಸಂಜು ಜೊತೆ ಅಪ್ರಾಪ್ತ ಬಾಲಕಿ ಪ್ರೀತಿ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಸಂಜು ಹುಲ್ಲೂರ ಅಪ್ರಾಪ್ತೆಯನ್ನು ದೈಹಿಕವಾಗಿ ಬಳಸಿಕೊಂಡು ಕೊಲೆ(Murder) ಮಾಡಿದ್ದಾನೆ ಎಂದು ಅಪ್ರಾಪ್ತೆಯ ಕುಟುಂಬದವರು ಆರೋಪಿಸಿದ್ದಾರೆ(Allegation). ಅಪ್ರಾಪ್ತೆಯನ್ನು ಕೊಲೆಗೈದು ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ(Women’s Police Station) ಪ್ರಕರಣ(Case) ದಾಖಲಾಗಿದೆ. 

Latest Videos

undefined

ವಿಜಯಪುರದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು: ಕಾರಣ..?

ಅಪ್ರಾಪ್ತೆಯ ಕುಟುಂಬದವರು ಕೊಟ್ಟ ದೂರಿನ(Complaint) ಮೇರೆಗೆ ಆರೋಪಿ(Accused) ಯುವಕ ಸಂಜು ಹುಲ್ಲೂರನನ್ನು ಪೊಲೀಸರು(Police) ಬಂಧಿಸಿದ್ದಾರೆ(Arrest).  ಅಪ್ರಾಪ್ತೆ ಸಾವನ್ನು ಖಂಡಿಸಿ ಬಂಜಾರಾ ಸಮುದಾಯದವರು(Banjara Commucity) ನಗರದ ಗಾಂಧಿಚೌಕ್ ಬಳಿ ಪ್ರತಿಭಟನೆ(Protest) ನಡೆಸಿ ಆರೋಪಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ. ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ನವವಿವಾಹಿತೆ ಅನುಮಾನಾಸ್ಪದ ಸಾವು, ಕೇಸ್‌ ಮುಚ್ಚಿ ಹಾಕಲು ಹಣದ ಆಮಿಷ?    

ಕೇವಲ ಐದಾರು ತಿಂಗಳ ಹಿಂದಷ್ಟೇ ಇಲ್ಲಿನ ಶಾಲಾ ಶಿಕ್ಷಕನೊಂದಿಗೆ ವಿವಾಹವಾಗಿದ್ದ, ಬೆಂಗಳೂರು(Bengaluru) ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಸೆ.25 ರಂದು ನಡೆದಿತ್ತು.  
ಯಾದಗಿರಿ(Yadgir) ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಳು. ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಈಕೆಯ ಪತಿ ಯಾದಗಿರಿ ಸಮೀಪದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ. ನವವಿವಾಹಿತೆಯ ಅನುಮಾನಾಸ್ಪದ ಸಾವಿನ ಪ್ರಕರಣದ ಮಾಹಿತಿ ಅರಿಯುತ್ತಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. 

ಇತ್ತ, ಪಾಲಕರು ಹಾಗೂ ಸಂಬಂಧಿಕರಿಗೆ ಈ ಮಾಹಿತಿ ದೊರೆತಾಗ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿದ ಅವರೆಲ್ಲರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲಿದ್ದ ಮಾಧ್ಯಮಗಳೆದುರು ಆಗ ಪ್ರತಿಕ್ರಿಯಿಸಿದ್ದ ಮೃತಳ ಸಮೀಪದ ಸಂಬಂಧಿಕರು, ಶಿಕ್ಷಕ ಪತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಆತ್ಮಹತ್ಯೆಯಲ್ಲ, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಕಿಡಿ ಕಾರಿದ್ದರು. 

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಕಚೇರಿಯ ಸಿಬ್ಬಂದಿ ಅನುಮಾನಾಸ್ಪದ ಸಾವು

ಪತಿಯ ನಡವಳಿಕೆಯ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದ ಆ ಸಂಬಂಧಿಕರು, ತಮ್ಮ ಮಗುವಿಗೆ (ನವವಿವಾಹಿತೆ) ಕಿರುಕುಳ ನೀಡಿ ಕೊಲೆ ಮಾಡಲಾಗಿದೆ. ಸರ್ಕಾರಿ ನೌಕರನೆಂಬ ಕಾರಣಕ್ಕೆ ಅದ್ಧೂರಿ ಮದುವೆ ಮಾಡಿದ್ದೆವು, ಮುಗ್ಧ ಜೀವ ಬಲಿಯಾಯ್ತು ಎಂದೆಲ್ಲಾ ಆರೋಪಿಸಿದ್ದರು. ಆದರೆ, ಬೆಳಿಗ್ಗೆಯಿಂದ ನಡೆದಿದ್ದ ಈ ಬೆಳವಣಿಗೆಗಳು ಸಂಜೆಯ ವೇಳೆ ಕರಗತೊಡ ಗಿದ್ದವು. ಶಿಕ್ಷಕ ಪತಿ ವಿರುದ್ಧ ದೂರು ನೀಡದಂತೆ, ಇದೊಂದು ಸಹಜ ಆತ್ಮಹತ್ಯೆ ಎಂಬಂತೆ ದೂರು ದಾಖಲಿಸುವಂತೆ ಪಾಲಕರಿಗೆ ಒತ್ತಡ ಹೇರುತ್ತಿದ್ದ ಕೆಲವರು, ಮನವೊಲೈಕೆಗೆ ಯತ್ನಿಸುತ್ತಿರುವುದು ಕಂಡುಬಂದಿತ್ತು.

ಶಿಕ್ಷಕರ ಸಂಘದ ಕೆಲವು ಮುಖಂಡರು, ರಾಜಕೀಯ(Politics) ಪ್ರಭಾವಿಗಳು ಪಾಲಕರ ಜೊತೆಗೆ ಮಾತು ಕತೆಗೆ ನಿಂತಂತಿತ್ತು. ಸುಮಾರು 10 ರಿಂದ 12 ಲಕ್ಷ ರು.ಗಳ ಹಣದ ಮಾತುಕತೆ ನಡೆದು, ಪತಿಯ ವಿರುದ್ಧ ಮುಂದಿನ ದಿನಗಳಲ್ಲಿ ದೂರು ನೀಡುವುದಿಲ್ಲ ಎಂಬುದಾಗಿ ಬಾಂಡ್ ಪೇಪರಿನಲ್ಲಿ ಬರೆಯಿಸಿಕೊಂಡ ಒಪ್ಪಂದ ನಡೆದು, ಕೊನೆಗೆ ನಗರ ಠಾಣೆಯಲ್ಲಿ ಆತ್ಮಹತ್ಯೆ(Suicide) ದೂರು ದಾಖಲಿಸಲಾಯಿತು ಎಂಬ ಮಾತುಗಳು ಸಾರ್ವಜನಿಕರ ಹಾಗೂ ಶಿಕ್ಷಕರ ವಲಯದಲ್ಲಿ ಕೇಳಿಬಂದಿದ್ದವು.
 

click me!