ತಂದೆಯ ಸಹೋದ್ಯೋಗಿಗಳಿಂದ ಅಪ್ರಾಪ್ತ ಸೋದರಿಯರ ಗ್ಯಾಂಗ್‌ ರೇಪ್: ಗರ್ಭಿಣಿಯಾದ ಬಾಲಕಿಯರು

By BK Ashwin  |  First Published Jul 31, 2023, 8:11 PM IST

ಅಪ್ರಾಪ್ತ ಬಾಲಕಿಯರ ಮೇಲೆ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇನ್ನು, ಸಾಮೂಹಿಕ ಅತ್ಯಾಚಾರಕ್ಕೊಳಗಾಗಿರುವ ಇಬ್ಬರೂ ಬಾಲಕಿಯರು ಗರ್ಭಿಣಿಯಾಗಿದ್ದಾರೆ ಎಂದೂ ತಿಳಿದುಬಂದಿದೆ.


ಅಲ್ವಾರ್‌ (ಜುಲೈ 31, 2023): ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆತಂಕಕಾರಿ ಘಟನೆ ನಡೆದಿರುವ ವರದಿಯಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇನ್ನು, ಸಾಮೂಹಿಕ ಅತ್ಯಾಚಾರಕ್ಕೊಳಗಾಗಿರುವ ಇಬ್ಬರೂ ಬಾಲಕಿಯರು ಗರ್ಭಿಣಿಯಾಗಿದ್ದಾರೆ ಎಂದೂ ಪೊಲೀಸರು ಹೇಳಿದರು.

ಈ ಸಂಬಂಧ ಬಾಲಕಿಯ ತಂದೆ ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 15 ಮತ್ತು 13 ವರ್ಷದ ತನ್ನ ಹೆಣ್ಣುಮಕ್ಕಳ ಮೇಲೆ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆಯರ ತಂದೆ ಆರೋಪಿಸಿದ್ದಾರೆ. 

Tap to resize

Latest Videos

ಇದನ್ನು ಓದಿ: ಗೋಲ್ಡ್‌ ಮೆಡಲಿಸ್ಟ್‌ ಡಾಕ್ಟರ್‌ಗೆ ಐಸಿಸ್‌ ನಂಟು! ಭಾಷಾ ನಿಪುಣ, 18 ಪುಸ್ತಕಗಳ ಲೇಖಕ ಅರೆಸ್ಟ್

ಹಿರಿಯ ಬಾಲಕಿ ಹೊಟ್ಟೆ ನೋವು ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಆಕೆಯ ಪೋಷಕರು ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದಾಗ, ಅವಳು ಏಳೂವರೆ ತಿಂಗಳ ಗರ್ಭಿಣಿ ಎಂದು ತಿಳಿಸಿದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು, ಈ ಬಗ್ಗೆ "ಅವಳ ಪೋಷಕರು ಅವಳನ್ನು ಪ್ರಶ್ನಿಸಿದಾಗ, ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಹುಡುಗಿ ತಿಳಿಸಿದಳು. ಅವರು ತನ್ನ ತಂಗಿಯ ಮೇಲೆಯೂ ಅತ್ಯಾಚಾರವೆಸಗಿದ್ದಾರೆ ಎಂದು ಅವಳು ಬಹಿರಂಗಪಡಿಸಿದಳು" ಎಂದೂ ಪೊಲೀಸರು ಹೇಳಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದೂ ಸಂತ್ರಸ್ತೆ ಹೇಳಿಕೊಂಡಿದ್ದಾಳೆ.

ಈ ಸಂಬಂಧ ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಾಲಕಿಯರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ (ಅಲ್ವಾರ್) ಆನಂದ್ ಶರ್ಮಾ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರಿಬ್ಬರೂ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಕಿರಿಯ ಸಂತ್ರಸ್ತೆ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 90 ದೇಶಗಳ ಜೈಲಿನಲ್ಲಿದ್ದಾರೆ 8,330 ಭಾರತೀಯ ಕೈದಿಗಳು: ಗಲ್ಫ್‌ ದೇಶಗಳ ಜೈಲಲ್ಲಿ ಹೆಚ್ಚು ಕೈದಿಗಳು

ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಇಬಿ ಎಸ್‌ಎಚ್‌ಒ ಅನಿಲ್ ಜೈನ್ ಹೇಳಿದ್ದಾರೆ. ಆದರೆ, ಈ ಸಂಬಂಧ ಇನ್ನೂ ಯಾರ ಬಂಧನವೂ ಆಗಿಲ್ಲ. ಸಂತ್ರಸ್ತರ ತಂದೆ ಕೆಲಸ ಮಾಡುವ ಇಟ್ಟಿಗೆ ಗೂಡು ಬಳಿ ಕುಟುಂಬ ವಾಸಿಸುತ್ತಿದೆ ಎಂದೂ ಅವರು ಹೇಳಿದರು.

ಮತ್ತೊಂದು ಪ್ರಕರಣದಲ್ಲಿ, ಅಲ್ವಾರ್ ಜಿಲ್ಲೆಯ ಬನ್ಸೂರ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಶುಕ್ರವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆನಂದ್ ಶರ್ಮಾ ಹೇಳಿದ್ದಾರೆ. ಶಾಲೆಗೆ ಹೋಗುತ್ತಿದ್ದ ವೇಳೆ ಇಬ್ಬರು ಆರೋಪಿಗಳು ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದೂ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್‌ ಅವರ ಆಧಾರ್‌ ಕಾರ್ಡ್‌ಗಳನ್ನೇ ತಿರುಚಿ ದುರುಪಯೋಗ ಮಾಡ್ಕೊಂಡ ಭೂಪ!

ಅಲ್ಲದೆ, ಆರೋಪಿಗಳು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ಹೇಳಲಾಗಿದೆ. ಜುಲೈ 27 ರಂದು ಘಟನೆ ನಡೆದಿದೆ ಎಂದೂ ತಿಳಿದುಬಂದಿದೆ. 
 

ಇದನ್ನು ಓದಿ: ಹೆದ್ದಾರಿಯಲ್ಲಿ ಸಿಕ್ಕ ಸಿಕ್ಕ ಕಾರುಗಳ ಮೇಲೆ ಶೂಟ್‌ ಮಾಡಿದ ಬೆತ್ತಲೆ ಮಹಿಳೆ: ವಿಡಿಯೋ ವೈರಲ್‌

click me!