
ಕೊಪ್ಪಳ: ಕನಕಗಿರಿ ತಾಲೂಕಿನ ವಸತಿ ನಿಲಯವೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಹಾಸ್ಟೆಲ್ ನಲ್ಲಿಯೇ ಹೆರಿಗೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಮೇಲೆ ಸ್ಥಳೀಯ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದೆ. ವಿಜಯನಗರ ಜಿಲ್ಲೆಯ ಅಲ್ತಾಫ್ ಎನ್ನುವಾತ ವಿದ್ಯಾರ್ಥಿನಿಯನ್ನು ಎರಡ್ಮೂರು ಭಾರಿ ಲೈಂಗಿಕವಾಗಿ ಬಳಸಿಕೊಂಡಿರುವುದಿಂದ ಬಾಲಕಿ ಗರ್ಭವತಿಯಾಗಿದ್ದಾಳೆ. ವಿದ್ಯಾರ್ಥಿನಿ ಹಾಗೂ ಆರೋಪಿ ಅಲ್ತಾಫ್ (21) ನಡುವೆ ವಿವಾಹ ನಿಗದಿಯಾಗಿತ್ತು ಎನ್ನಲಾಗಿದ್ದು, ಆರೋಪಿಯು ಮದುವೆಗೂ ಮುನ್ನ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ವಿಚಾರಣೆ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆ ಆಮೀಷವೊಡ್ಡಿದ್ದ ಸೋದರಮಾವ ಅಲ್ತಾಫ್ ಅಕ್ಟೋಬರ್‌ನಲ್ಲಿಯೇ ಬಾಲಕಿ ಮೇಲೆ ಅತ್ಯಾ*ಚಾರ ಎಸಗಿದ್ದನು. ಅಲ್ತಾಫ್ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಮದುವೆಯಾಗೋದಾಗಿ ದೈಹಿಕ ಸಂಪರ್ಕ ಬೆಳಸಿದ್ದನೆಂದು ಉಲ್ಲೇಖವಾಗಿದೆ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪೋಕ್ಸೋ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಗಾಯಕ ಮ್ಯೂಸಿಕ್ ಮೈಲಾರಿಗೆ ಷರತ್ತುಬದ್ಧ ಜಾಮೀನು
ಕನಕಗಿರಿ ತಾಲೂಕಿನ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ ಎಂಬ ವಿಚಾರ ನನ್ನ ಗಮನಕ್ಕೂ ಬಂದಿದೆ. ವಾಸ್ತವ ಪರಿಶೀಲನೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಇದನ್ನೂ ಓದಿ: ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆ; ಅಪಘಾತದಲ್ಲಿ ಬೈಕ್ ಸವಾರ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ