
ಇಂದೋರ್ (ಜೂ. 06): ಮಧ್ಯಪ್ರದೇಶದ ಇಂದೋರ್‌ನಲ್ಲಿ ಅತ್ಯಾಚಾರ ಸಂತ್ತಸ್ತೆಯೊಬ್ಬರು ಬಡತನದ ಕಾರಣ ಮಗುವನ್ನು ನೋಡಿಕೊಳ್ಳಲು ವಿಫಲವಾದ ಕಾರಣ ತನ್ನ ಎರಡು ತಿಂಗಳ ಮಗುವನ್ನು ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಬಂಧ
ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಸಂತ್ರಸ್ತೆಯಾಗಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ ಎಂದು ಇಂದೋರ್‌ನ ಹೆಚ್ಚುವರಿ ಡಿಸಿಪಿ ರಾಜೇಶ್ ವ್ಯಾಸ್ ಹೇಳಿದ್ದಾರೆ.
“ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ್ದು, ಆಕೆಯ ಕುಟುಂಬಸ್ಥರು ಆಕೆಯನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದರು ಇದರಿಂದ ಹತಾಶಳಾದ ಆಕೆ ತನ್ನ ಎರಡು ತಿಂಗಳ ಮಗುವನ್ನು ಕೊಂದು ಹಾಕಿದ್ದಾಳೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ." ಎಂದು ಪೊಲೀಸ್ ತಿಳಿಸಿದ್ದಾರೆ.
ಶಿಶುವಿನ ಮರಣೋತ್ತರ ಪರೀಕ್ಷೆ ನಂತರ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. "ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಇದು ಕೊಲೆಯ ಕೃತ್ಯವನ್ನು ಬಹಿರಂಗಪಡಿಸಿದೆ. ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹುಡುಗಿಯನ್ನು ಬಂಧಿಸಲಾಗಿದೆ" ಎಂದು ವ್ಯಾಸ್ ಹೇಳಿದ್ದಾರೆ..
ಇದನ್ನೂ ಓದಿ: ತನ್ನ ಮಾಜಿ ಪ್ರೇಮಿಯ ಪ್ರೀತಿಸಿದ ಯುವಕನ ಮೇಲೆ ಹಲ್ಲೆ
ಇದನ್ನೂ ಓದಿ: ಗೆಳೆಯರಿಲ್ಲ ಮೊಬೈಲೇ ಎಲ್ಲಾ... ನೇಣಿಗೆ ಶರಣಾದ ಪಿಯು ವಿದ್ಯಾರ್ಥಿನಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ