ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕುಡುಕನ ಅಟ್ಟಹಾಸ; ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಮೇಲೆ ಹಲ್ಲೆಗೈದ ಕಿಡಿಗೇಡಿ!

Kannadaprabha News   | Kannada Prabha
Published : Apr 12, 2026, 06:25 AM IST
Miscreant who assaulted police in an intoxicated state arrested

ಸಾರಾಂಶ

ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿ, ಮಧ್ಯರಾತ್ರಿ ಬಾರ್ ಬಾಗಿಲು ತೆರೆಯುವಂತೆ ಗಲಾಟೆ ಮಾಡುತ್ತಿದ್ದ ಕುಡುಕನೊಬ್ಬನನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಈ ವೇಳೆ ಆತ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ,  ಹಲ್ಲೆ ಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಂಧಿಸಲಾಗಿದೆ.

ಬೆಂಗಳೂರು (ಏ.12): ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯ ಎಎಸ್‌ಐ ಸಿದ್ದರಾಮ ಅವರು ನೀಡಿದ ದೂರಿನನ್ವಯ ಸಾಯಿಕುಮಾರ್‌ ರೆಡ್ಡಿ (26) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏ.7 ರಂದು ಎಎಸ್‌ಐ ಸಿದ್ದರಾಮ ಮತ್ತು ಪೊಲೀಸ್‌ ಕಾನ್‌ಸ್ಟೇಬಲ್‌ ಮುತ್ತುರಾಜು ಅವರು ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿ 1.45 ರ ಸುಮಾರಿಗೆ ನೀಲಾದ್ರಿ ರಸ್ತೆಯಲ್ಲಿ ಗಸ್ತಿನಲ್ಲಿದ್ದಾಗ ವ್ಯಕ್ತಿಯೊಬ್ಬ ಹೊಯ್ಸಳ ವಾಹನ ನಿಲ್ಲಿಸಿ ಪಿಸಿಆರ್‌ ಜಂಕ್ಷನ್‌ ಹತ್ತಿರ ಇರುವ ಬಾರ್‌ವೊಂದರ ಶೆಟರ್‌ ಬಾಗಿಲನ್ನು ವ್ಯಕ್ತಿಯೊಬ್ಬ ಜೋರಾಗಿ ಬಡಿದು ನನಗೆ ಡ್ರಿಂಕ್ಸ್‌ ಬೇಕಾಗಿದ್ದು ಬಾಗಿಲು ತೆರೆಯುವಂತೆ ಗಲಾಟೆ ಮಾಡುತ್ತಿದ್ದಾನೆ ಎಂದು ತಿಳಿಸಿದನು.

ಅದರಂತೆ ಪೊಲೀಸರು ಬಾರ್‌ ಹತ್ತಿರ ಹೋಗಿ ನೋಡಿದ್ದಾಗ ಒಬ್ಬ ವ್ಯಕ್ತಿ ಮದ್ಯದ ಅಮಲಿನಲ್ಲಿ ಕೂಗಾಡುತ್ತಾ ಡ್ರಿಂಕ್ಸ್‌ ಕೊಡುವಂತೆ ಬಾರ್‌ ಬಾಗಿಲನ್ನು ಜೋರಾಗಿ ಬಡಿಯುತ್ತಿದ್ದ. ಬಾರ್‌ನ ಕ್ಯಾಶಿಯರ್‌ ಜತೆ ಜಗಳ ಗಲಾಟೆ ಮಾಡುತ್ತಿದ್ದನು. ಈ ಬಗ್ಗೆ ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಪೊಲೀಸರ ಸಮವಸ್ತ್ರ ಹಿಡಿದು ಎಳೆದಾಡಿ ಮುಖಕ್ಕೆ ಹಲ್ಲೆ ಮಾಡಿದ್ದನು. ನಂತರ ಆತನನ್ನು ಹೊಯ್ಸಳ ವಾಹನದಲ್ಲಿ ಕರೆದುಕೊಂಡು ಹೋಗುವಾಗಲು ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನು. ನಂತರ ಎಎಸ್‌ಐ ಸಿದ್ದರಾಮ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಪಿಯ ವಿರುದ್ಧ ನೀಡಿದ್ದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- ಏ.7 ರಂದು ಎಎಸ್‌ಐ ಸಿದ್ದರಾಮ, ಕಾನ್‌ಸ್ಟೇಬಲ್‌ ಮುತ್ತುರಾಜು ರಾತ್ರಿ ಕರ್ತವ್ಯದಲ್ಲಿದ್ದರು.

-ಮಧ್ಯರಾತ್ರಿ ವ್ಯಕ್ತಿಯೊಬ್ಬನಿಂದ ಬಾರ್‌ ಬಾಗಿಲು ಬಡಿದು ಗಲಾಟೆ ಮಾಡುತ್ತಿದ್ದಾನೆ ಎಂದು ಮಾಹಿತಿ

-ಬಳಿಕ ಸ್ಥಳಕ್ಕೆ ತೆರಳಿದಾಗ ಮದ್ಯದ ಅಮಲಲ್ಲಿ ಡ್ರಿಂಕ್ಸ್‌ ಕೊಡುವಂತೆ ಕೂಗಾಡುತ್ತಾ ಬಾಗಿಲು ಬಡಿಯುತ್ತಿದ್ದ

- ಈ ಬಗ್ಗೆ ಪ್ರಶ್ನಿಸಿದಾಗ ನಿಂದಿಸಿದ್ದಲ್ಲದೇ ಪೊಲೀಸರ ಸಮವಸ್ತ್ರ ಎಳೆದಾಡಿ ಮುಖಕ್ಕೆ ಹಲ್ಲೆ ಮಾಡಿದ್ದಾನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಚಿತ್ರ ಘಟನೆ: ದೇಗುಲದಲ್ಲಿ ಹಣ ಕದ್ದು ಅಲ್ಲೇ ಮಲಗಿದ್ದ ಕಳ್ಳ ಪೊಲೀಸರ ಕೈಗೆ ಸಿಕ್ಕಿಬಿದ್ದ!
ಆಕೆಯೊಟ್ಟಿಗೆ ರೂಮ್​ಗೆ ಹೋದಾಗ ಆದಿತ್ಯ, ಬಟ್ಟೆ ಬಿಚ್ಚಿದಾಗ ಅಬ್ದುಲ್ಲಾ! ಮತಾಂತರಕ್ಕೆ ಯತ್ನಿಸಿದವನಿಗೆ ಪರೇಡ್​