ಪುಂಡರು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಯುವಕನ ಬೈಕ್ ಬೀಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಕಾರಿನಲ್ಲಿ ಕುಳಿತಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಆನೇಕಲ್(ಫೆ.18): ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಹೌದು, ಯುವಕ ಯುವತಿ ಇದ್ದ ಬೈಕ್‌ಗೆ ಅಡ್ಡ ಹಾಕಿ ಹಲ್ಲೆ ಮಾಡಿರುವ ಘಟನೆ ಸರ್ಜಾಪುರ ಹಾಗೂ ಕುಂದನಪಲ್ಲಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಪುಂಡರು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಯುವಕನ ಬೈಕ್ ಬೀಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಕಾರಿನಲ್ಲಿ ಕುಳಿತಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸರ್ಜಾಪುರ ಹಾಗೂ ಬೆಂಗಳೂರು ರಸ್ತೆಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ನಿರಂತರವಾಗಿ ನಡೆಯುತ್ತಿದೆ. Ka-53,hf-2132 ಬೈಕ್ ನಲ್ಲಿ ಬಂದಿದ್ದ ಪುಂಡರು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.
ಮಂಡ್ಯ: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆತಂದು ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು!
ವರ್ತೂರು ಹಾಗೂ ಮಾರತ್ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಆಗಾಗ ಮರುಕಳಿಸುತ್ತಿವೆ. ಸದ್ಯ ಈ ವಿಡಿಯೋ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘಟನೆ ಕಳೆದ ವಾರ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.