
ಮೀರತ್( ಏ. 01) ಉತ್ತರ ಪ್ರದೇಶದಲ್ಲಿ ಮತ್ತೆ ಮತ್ತೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಲೇ ಇವೆ. ಹೋಳಿ ಆಚರಣೆ ವೇಳೆ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಲಾಗಿದೆ.
ಪೂಜೆ ಮುಗಿಸಿ ಮನೆಗೆ ಬರುತ್ತಿದ್ದ ಯುವತಿಯನ್ನು ಅಡ್ಡ ಹಾಕಿ ದೌರ್ಜನ್ಯ ಎಸಗಲಾಗಿದ್ದು ಆಕೆಯ ಬಟ್ಟೆಗಳನ್ನು ಹರಿದು ಹಾಕಲಾಗಿದೆ.
ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸೂರ್ಯಪುರಂ ಪ್ರದೇಶದಲ್ಲಿ ಘಟನೆ ನಡೆದಿದೆ. ಸಂತ್ರಸ್ತೆ ಪೂಜೆ ನಡೆಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.
ಸಿಡಿ ಕೇಸ್ ನ ಒಂದೊಂದೆ ಮುಖಗಳು ಬಹಿರಂಗ
ಮನೆಗೆ ಬರುತ್ತಿದ್ದ 10 ನೇ ತರಗತಿಯ ವಿದ್ಯಾರ್ಥಿನಿಗೆ ಟೀಸಿಂಗ್ ಮಾಡಲಾಗಿದ್ದು ಆಕೆಯ ಬಟ್ಟೆಗಳನ್ನು ಹರಿದು ಹಾಕಲಾಗಿದೆ. ಬಾಲಕಿ ವಿರೋಧಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿಸ್ದಾರೆ.
ಬಾಲಕಿಯ ತಾಯಿ ಸ್ಥಳೀಯ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ ಮಾರ್ಚ್ 29 ರಂದು ಹುಡುಗಿ ಹೋಳಿ ಆಡಲು ತನ್ನ ಸ್ನೇಹಿತನ ಸ್ಥಳಕ್ಕೆ ಹೋದಾಗ ಈ ಘಟನೆ ನಡೆದಿದೆ.
ಹೋಳಿ ಆಡಿಕೊಂಡು ದೇವಾಲಯಕ್ಕೆ ಬಾಲಕಿ ತೆರಳಿದ್ದಳು. ಅಲ್ಲಿಂದ ವಾಪಸ್ ಬರುವಾಗ ದುಷ್ಕರ್ಮಿಗಳ ತಂಡ ಆಕೆಯನ್ನು ಅಡ್ಡ ಹಾಕಿದೆ. ಆಕೆಯ ಮೇಲೆ ಅಶ್ಲೀಲ ಮಾತುಗಳನ್ನು ಆಡಿದ್ದಾರೆ. ಸ್ಥಳಕ್ಕೆ ಹೋದ ಬಾಲಕಿ ಸಹೋದರನಿಗೆ ಬೆದರಿಕೆ ಹಾಕಲಾಗಿದೆ.
ಪೊಲೀಸರು ಆರೋಪಿಗಳ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಭಾಷ್ ಅತ್ರಿ ಮಾತನಾಡಿ, ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ