ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಬಳಿ ಜಲೀಲ್ ಅವರ ಎದೆಯ ಭಾಗಕ್ಕೆ ಚೂರಿಯಿಂದ ಇರಿಯಲಾಗಿತ್ತು. ಜಲೀಲ್ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾಗಿತ್ತು.
ಸುರತ್ಕಲ್(ಡಿ.24): ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿದ್ದ ಕೃಷ್ಣಾಪುರ ನೈತಂಗಡಿ ನಿವಾಸಿ ಜಲೀಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇಂದು(ಶನಿವಾರ) ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಬಳಿ ಜಲೀಲ್ ಅವರ ಎದೆಯ ಭಾಗಕ್ಕೆ ಚೂರಿಯಿಂದ ಇರಿಯಲಾಗಿತ್ತು. ಜಲೀಲ್ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾಗಿತ್ತು.
Mangaluru: ಅಯ್ಯಪ್ಪ ಮಾಲಾಧಾರಿಗೆ ವಿದ್ಯಾರ್ಥಿಗಳಿಂದ ಹಲ್ಲೆ: ಮಾಲೆ ಧರಿಸಿ ಶಾಲೆಗೆ ಬರದಂತೆ ಸೂಚಿಸಿದ್ರಂತೆ ಶಿಕ್ಷಕರು!
ತಕ್ಷಣ ಜಲೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.