
ದಕ್ಷಿಣ ಕನ್ನಡ(ಜೂ.09): ನರೇಂದ್ರ ಮೋದಿ ಅವರು ಇಂದು(ಭಾನುವಾರ) ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯನ್ನ ಮಾಡಿದ್ದಾರೆ.
ಅದೇ ರೀತಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ಹಾಗೂ ನಂದ ಕುಮಾರ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು.
ದಾಬಸ್‌ಪೇಟೆ: ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಚಾಕು ಇರಿತ
ಯುವಕರು ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಯುವಕರಿಗೆ ಇರಿದಿದ್ದಾರೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ