ಉಡುಪಿ: ಚೂರಿಯಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನ ಕೊಂದ ದುಷ್ಕರ್ಮಿಗಳು..!

By Girish Goudar  |  First Published Nov 12, 2023, 11:30 AM IST

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯಿಂದಷ್ಟೇ ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ. 


ಉಡುಪಿ(ನ.11): ಒಂದೇ ಕುಟುಂಬದ ನಾಲ್ವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆ ಮಲ್ಪೆ ಠಾಣಾ ವ್ಯಾಪ್ತಿಯ ತೃಪ್ತಿನಗರದಲ್ಲಿ ಇಂದು(ಭಾನುವಾರ) ನಡೆದಿದೆ.   ಹಸೀನಾ(46), ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂಬುವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ತಾಯಿ ಮತ್ತು ಮೂವರು ಮಕ್ಕಳನ್ನ ಕೊಲೆ ಮಾಡಲಾಗಿದೆ. 

ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಹಾಗೂ ಮಹಿಳೆಯ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಫಾನ್, ಐನಾಜ್‌ಗೆ ಮೊದಲು ದುಷ್ಕರ್ಮಿ ಚೂರಿಯಿಂದ ಇರಿದಿದ್ದಾನೆ. ಚೀರಾಟ ಸದ್ದು ಕೇಳಿ ಆಟವಾಡುತ್ತಿದ್ದ ಆಸೀಮ್ ಒಳ ಬರುತ್ತಿದ್ದಂತೆ ಇರಿದು ಕೊಂದಿದ್ದಾನೆ ದುಷ್ಕರ್ಮಿ. 

Tap to resize

Latest Videos

undefined

Mandya: ಜಮೀನು ವಿಚಾರಕ್ಕೆ ಗನ್ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲಿ ಒದ್ದಾಡಿ ಪ್ರಾಣಬಿಟ್ಟ ಪುತ್ರ

ಇವರ ಮನೆಯಿಂದ ಬೊಬ್ಬೆ ಕೇಳಿ ಪಕ್ಕದ ಮನೆ ಯುವತಿ ಹೊರಗಡೆ ಬಂದಿದ್ದಾರೆ. ಆಕೆಯನ್ನೂ ಬೆದರಿಸಿ ಸ್ಥಳದಿಂದ ದುಷ್ಕರ್ಮಿ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಅತ್ತೆಗೂ ತೀವ್ರ ತರದ ಗಾಯವಾಗಿದೆ.  ಕೊಲೆಯಾದ ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್‌ಪಿ ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

click me!