ಕೊಪ್ಪಳ: ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ!

By Ravi Janekal  |  First Published Apr 22, 2024, 12:01 AM IST

ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕಿ ಇಂದು ಪಾಳು ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದೆ.


 

ಕೊಪ್ಪಳ (ಏ.21): ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕಿ ಇಂದು ಪಾಳು ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದೆ.

Tap to resize

Latest Videos

undefined

ಅನುಶ್ರೀ ಮಡಿವಾಳರ್(7) ಶವವಾಗಿ ಪತ್ತೆಯಾದ ಬಾಲಕಿ. ಏ.19ರಂದು ರಂದು ಮಧ್ಯಾಹ್ನ ಆಟವಾಡುವುದಾಗಿ ಮನೆಯಿಂದ ಹೊರಹೋಗಿದ್ದ ಬಾಲಕಿ ವಾಪಸ್ ಮನೆಗೆ ಬಾರದೇ ನಿಗೂಢವಾಗಿ ಕಾಣೆಯಾಗಿದ್ದಳು. ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಆತಂಕಕೊಂಡು ಸುತ್ತಮುತ್ತ ಎಲ್ಲ ಕಡೆ ಹುಡುಕಾಟ ನಡೆಸಿದ್ದ ಪೋಷಕರು. ಆದರೆ ಬಾಲಕಿ ಪತ್ತೆಯಾಗಿರಲಿಲ್ಲ. ಆದರೆ ಇಂದು ಪಾಳು ಮನೆಯೊಂದರಲ್ಲಿ ಅನುಮಾನಸ್ಪಾದವಾಗಿ ಕೊಳೆತ ಸ್ಥಿತಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. 

ಟಿಪ್ಪರ್ ಲಾರಿ ಹರಿದು 4 ವರ್ಷದ ಮಗು ಆಯುಷ್ಯ ದುರ್ಮರಣ!

ಮೃತ ಬಾಲಕಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಪಾಳುಮನೆಯಲ್ಲಿ ಎಸೆದಿರುವ ಹಂತಕರು. ಅನುಶ್ರೀಯನ್ನು ಕೊಲೆ ಮಾಡಿ ಚೀಲದಲ್ಲಿ ಶವವನ್ನು ಹಾಕಿರುವ ಹಂತಕರು. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೊಪ್ಪಳ ಎಸ್‌ಪಿ ಯಶೋಧಾ ವಂಟಗೋಡಿ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಪ್ಪಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
 

click me!