ಬಸವನಬಾಗೇವಾಡಿ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಕಾರಣ?

By Kannadaprabha News  |  First Published Feb 4, 2021, 11:48 AM IST

ಯುವಕನೊಬ್ಬನನ್ನ ಪ್ರೀತಿಸುತ್ತಿದ್ದ ಬಾಲಕಿ| ತನ್ನ ಮಗಳನ್ನು ಅಪಹರಿಸಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿದ್ದಾನೆ ಎಂದು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಮೃತ ಬಾಲಕಿಯ ತಂದೆ| ಪೋಕ್ಸೋ ಕಾಯ್ದೆ ಹಾಗೂ ಅಪಹರಣ, ಕೊಲೆ ಕಾಯ್ದೆಯಡಿ ಪ್ರಕರಣ ದಾಖಲು| 


ಬಸವನಬಾಗೇವಾಡಿ(ಫೆ.04): ಜ.31ರಂದು ಕಾಣೆಯಾಗಿದ್ದ ಅಪ್ರಾಪ್ತೆಯು ಶವವಾಗಿ ತೋಟದ ಬಾವಿಯಲ್ಲಿ ಮಂಗಳವಾರ ರಾತ್ರಿ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಈ ಘಟನೆ ಕುರಿತಂತೆ ಸಂತೋಷ ತಿಪ್ಪಣ್ಣ ಕಾಡಮಗೇರಿ (22) ಎಂಬ ಯುವಕನು ತನ್ನ ಮಗಳನ್ನು ಪ್ರೀತಿಸುತ್ತಿದ್ದ. ಅವನೇ ನನ್ನ ಮಗಳನ್ನು ಅಪಹರಿಸಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿದ್ದಾನೆ ಎಂದು ಮೃತ ಬಾಲಕಿಯ ತಂದೆ ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾನೆ. 

Tap to resize

Latest Videos

ಎಟಿಎಂಗೆ ತುಂಬಬೇಕಿದ್ದ 64 ಲಕ್ಷ ರೂ. ಕದ್ದು ಪರಾರಿ..!

ಈ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಅಪಹರಣ, ಕೊಲೆ ಕಾಯ್ದೆಯಡಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬುಧವಾರ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ಡಿವೈಎಸ್ಪಿ ಶಾಂತವೀರ, ಸಿಪಿಐ ಸೋಮಶೇಖರ ಜುಟ್ಟಲ್‌, ಪಿಎಸ್‌ಐ ಚಂದ್ರಶೇಖರ ಹೆರಕಲ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.
 

click me!