
ತುಮಕೂರು (ನ.24): ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಇಂದು ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ದುರ್ದೈವಿಯನ್ನು ಮಧು (38) ಎಂದು ಗುರುತಿಸಲಾಗಿದೆ. ಮಧುಗಿರಿ ತಾಲೂಕಿನ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ವ್ಯಕ್ತಿ ಕಾಣೆಯಾಗಿದ್ದ ಬಗ್ಗೆ ಈ ಹಿಂದೆಯೇ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಾಗಿತ್ತು.
ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯಲ್ಲಿರುವ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಗೆ ಬಿದ್ದು ಮಧು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ಜಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಅಪಘಾತದಿಂದ ಸಂಭವಿಸಿದ ಸಾವು ಮತ್ತು ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮಧುಗಿರಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ