
ಶಿವಮೊಗ್ಗ (ಅ.24): ಸಾಮಾನ್ಯವಾಗಿ ಮೊಬೈಲ್ ಕಳ್ಳತನ, ಟವರ್ ಬಿಡಿಭಾಗಗಳು ಕಳ್ಳತನ ಆಗಿರುವ ಬಗ್ಗೆ ಕೇಳಿದ್ದೇನೆ. ಆದರೆ ಶಿವಮೊಗ್ಗ ಮೊಬೈಲ್ ಟವರ್ ಅನ್ನೇ ಕದ್ದ ಘಟನೆ ನಡೆದಿದೆ.
ಹೌದು ಖಾಸಗಿ ಸಂಸ್ಥೆಯೊಂದು 2008ರಲ್ಲಿ ಶಿವಮೊಗ್ಗದ ಟಿಪ್ಪು ನಗರದಲ್ಲಿನ ಖಾಲಿ ಜಾಗದಲ್ಲಿ ಮೊಬೈಲ್ ಟವರ್ ಅಳವಡಿಸಿತ್ತು. ಸುತ್ತಮುತ್ತಲಿನ ನೆಟ್ವರ್ಕ್ ಅದೇ ಸಂಸ್ಥೆ ಟವರ್ ನಿರ್ವಹಣೆ ಮಾಡುತ್ತಿತ್ತು. ಆದರೆ ಕೊರೊನಾ ಸಂದರ್ಭ ಸಿಬ್ಬಂದಿ ಇಲ್ಲದೆ ನಿರ್ವಹಣೆ ಮಾಡಲು ಸಾಧ್ಯವಾಗಿರಲಿಲ್ಲ. ಕೊರೊನಾ ಬಳಿಕ ಸಂಸ್ಥೆ ಸಿಬ್ಬಂದಿ ಸ್ಥಳಕ್ಕೆ ಬಂದು ನೋಡಿದಾಗ ಮೊಬೈಲ್ ಟವರ್ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳೇ ನಾಪತ್ತೆಯಾಗಿದ್ದವು. ಸುಮಾರು ₹46.30 ಲಕ್ಷ ಮೌಲ್ಯದ ಟವರ್ ಮತ್ತು ಬಿಡಿ ಭಾಗಗಳು ಕಳ್ಳತನವಾಗಿದೆ.
ಭವಿಷ್ಯದಲ್ಲಿ ಜೈಲುಗಳೇ ಇರೋದಿಲ್ಲ; ಮನೆಯೇ ಜೈಲು! ಏನಿದು ವರ್ಚುವಲ್ ಪ್ರಿಸನ್?
ಈ ಸಂಬಂಧ ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟವರ್ ಕದ್ದ ಖದೀಮರ ಪತ್ತೆಗೆ ಮುಂದಾಗಿರುವ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ