ರಾಗಿಣಿ ಹಾಗೂ ಸಂಜನಾ ಪ್ರಕರಣದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಅವಕಾಶ ನೀಡಬೇಕು ಎಂದು ಇ.ಡಿ. ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಇದೀಗ ಕೋರ್ಟ್ ಅಸ್ತು ಎಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಬೆಂಗಳೂರು(ಸೆ.25): ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಇದೀಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆಯ ಬಿಸಿ ತಾಗಲಿದೆ. ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.
undefined
ಪ್ರಕರಣದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಅವಕಾಶ ನೀಡಬೇಕು ಎಂದು ಇ.ಡಿ. ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಮತ್ತು ಅವರ ಸ್ನೇಹಿತರಾದ ವಿರೇಂದ್ರ ಖನ್ನಾ, ರವಿಶಂಕರ್ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡಿದೆ. ನ್ಯಾಯಾಲಯವು ಅನುಮತಿ ನೀಡಿರುವುದರಿಂದ ಐದು ದಿನಗಳ ಕಾಲ ಇ.ಡಿ. ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ವಿಚಾರಣೆ ನಡೆಸಲಿದ್ದಾರೆ.
ಓಪನ್ ಕೋರ್ಟ್‌ನಲ್ಲಿ ನೋಡಲಾಗದ ಸಿಡಿಗಳು, ರಾಗಿಣಿ, ಸಂಜನಾ ರಹಸ್ಯ ಬಟಾಬಯಲು!
ಸಿಸಿಬಿ ಅಧಿಕಾರಿಗಳು ಆರೋಪಿಗಳ ನಿವಾಸದಲ್ಲಿ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಜಾಲದಲ್ಲಿ ಅಪಾರ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಬೇಕಾಗಿದೆ. ವಿಚಾರಣೆ ವೇಳೆ ಹಣ ವರ್ಗಾವಣೆ ಕುರಿತು ಮಾಹಿತಿ ಕಲೆ ಹಾಕಬೇಕು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಅನುಮತಿ ನೀಡುವಂತೆ ಇ.ಡಿ. ಅಧಿಕಾರಿಗಳು ಕೋರಿದ್ದರು.
ಐದು ದಿನಗಳ ಕಾಲ ಇ.ಡಿ. ಅಧಿಕಾರಿಗಳು ಆರೋಪಿಗಳನ್ನು ವಿಚಾರಣೆ ನಡೆಸಿ ಹಣ ವರ್ಗಾವಣೆ ಕುರಿತು ಹೆಚ್ಚಿನ ಮಾಹಿತಿ ಕ್ರೋಢೀಕರಿಸಲಿದ್ದಾರೆ. ಒಂದು ವೇಳೆ ಅಕ್ರಮ ಹಣ ವರ್ಗಾವಣೆಯಾಗಿರುವುದು ಕಂಡು ಬಂದರೆ ಆರೋಪಿಗಳಿಗೆ ಮತ್ತೊಂದು ಸಂಕಷ್ಟಎದುರಾಗಲಿದೆ ಎಂದು ಮೂಲಗಳು ಹೇಳಿವೆ.