
ಬೆಂಗಳೂರು (ನ.01): ಚಲನಚಿತ್ರ ನಿರ್ಮಿಸುವ ನೆಪದಲ್ಲಿ .1.6 ಕೋಟಿ ವಂಚನೆಗೆ ಒಳಗಾದ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರನ್ನು ಭೇಟಿಯಾಗಿ ಹಿರಿಯ ನಿರ್ದೇಶಕ ಎಸ್.ನಾರಾಯಣ್ ಶನಿವಾರ ದಾಖಲೆ ಸಲ್ಲಿಸಿದ್ದಾರೆ.
ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ತೆರಳಿ ಇನ್ಸ್‌ಪೆಕ್ಟರ್ ಪುನೀತ್ ಅವರಿಗೆ ಪ್ರಕರಣದ ಬಗ್ಗೆ ನಿರ್ದೇಶಕ ನಾರಾಯಣ್ ಮಾಹಿತಿ ನೀಡಿದ್ದಾರೆ. ಬಳಿಕ ಕೆಲವು ದಾಖಲೆಗಳನ್ನು ಸಲ್ಲಿಸಿ ಅವರು ಹೊರ ಬಂದಿದ್ದಾರೆ. ಸಿಸಿಬಿ ಅಧಿಕಾರಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ್ ಅವರು, ಚಲನಚಿತ್ರ ನಿರ್ಮಿಸುವುದಾಗಿ ಐವರು ಬಂದಿದ್ದರು.
ಅವರ ಮಾತು ನಂಬಿ ನಾನು ಸಿನಿಮಾ ಶುರು ಮಾಡಿದೆ. ಆದರೆ ಚಿತ್ರೀಕರಣ ಹಂತದಲ್ಲಿ ಹಣಕಾಸಿಗೆ ಒಂದಲ್ಲೊಂದು ಕಾರಣ ಕೊಡುತ್ತಿದ್ದರು. ಆರೋಪಿಗಳ ಮಾತು ನಂಬಿ ನನಗೆ ನಷ್ಟವಾಯಿತು ಎಂದು ಹೇಳಿದರು.
ಈ ವಂಚನೆ ಬಗ್ಗೆ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಚ್ಚಿನ ತನಿಖೆ ಸಲುವಾಗಿ ಸಿಸಿಬಿಗೆ ವರ್ಗವಾಗಿದೆ. ಹಾಗಾಗಿ ಪ್ರಕರಣದ ಬಗ್ಗೆ ಅಧಿಕಾರಿಗಳಿಗೆ ದಾಖಲೆ ಸಲ್ಲಿಕೆಗೆ ಭೇಟಿಯಾಗಿದ್ದೆ ಎಂದು ನಿರ್ದೇಶಕರು ಸ್ಪಷ್ಟಪಡಿಸಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ