ಮಂಗಳೂರು: ಪಡ್ಡಂಗಡಿಯಲ್ಲಿ ಖಾಸಗಿ ಬಸ್ ಪಲ್ಟಿ: 8 ಜನರಿಗೆ ಗಾಯ

Published : Aug 26, 2023, 07:41 AM IST
ಮಂಗಳೂರು: ಪಡ್ಡಂಗಡಿಯಲ್ಲಿ ಖಾಸಗಿ ಬಸ್ ಪಲ್ಟಿ: 8 ಜನರಿಗೆ ಗಾಯ

ಸಾರಾಂಶ

ಪಡ್ಡಂಗಡಿಯಲ್ಲಿ‌ ಶುಕ್ರವಾರ ರಾತ್ರಿ ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ 8 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಮೂಡಬಿದ್ರೆಯ  ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಮಂಗಳೂರು (ಆ.26): ಪಡ್ಡಂಗಡಿಯಲ್ಲಿ‌ ಶುಕ್ರವಾರ ರಾತ್ರಿ ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ 8 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಮೂಡಬಿದ್ರೆಯ  ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ ಬೆಂಗಳೂರಿಗೆ ಸಾಗುವ ವಿಶಾಲ್ ಟೂರಿಸ್ಟ್ ಆಗಿದ್ದು, ಬೆಳ್ತಂಗಡಿ ತಾಲೂಕಿನ ಪಡ್ಡಂಗಡಿ-ಗಾಂಧೀನಗರದ ನಡುವೆ ಅಪಘಾತಕ್ಕೀಡಾಗಿದೆ. ತಕ್ಷಣ ಅಂಬ್ಯುಲೆನ್ಸ್ ಸೇವೆಯ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಲಾರಿ ಹರಿದು ಫುಡ್‌ ಡೆಲಿವರಿ ಬಾಯ್‌ ಸ್ಥಳದಲ್ಲೇ ಸಾವು!: ಗುಂಜೂರು ಮುಖ್ಯರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಪರಿಚಿತ ಲಾರಿ ಹರಿದು ಫುಡ್‌ ಡೆಲಿವರಿ ಬಾಯ್‌ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸಕೋಟೆ ನಿವಾಸಿ ನಿಯಾಮ್‌(24) ಮೃತ ಫುಡ್‌ ಡೆಲಿವರಿ ಬಾಯ್‌. ಅಸ್ಸಾಂ ಮೂಲದ ನಿಯಾಮ್‌ ಆರು ತಿಂಗಳ ಹಿಂದೆ ನಗರಕ್ಕೆ ಬಂದು ಫುಡ್‌ ಡೆಲಿವರಿ ಬಾಯ್‌ ಕೆಲಸ ಮಾಡುತ್ತಿದ್ದ. ಮಂಗಳವಾರ ರಾತ್ರಿ 9.15ರ ಸುಮಾರಿಗೆ ಫುಡ್‌ ಡೆಲಿವರಿ ನೀಡಲು ದ್ವಿಚಕ್ರ ವಾಹನದಲ್ಲಿ ಗುಂಜೂರು ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ. 

ಲೋಕಸಭಾ ಚುನಾವಣೆ ಮತ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಅಭಿಯಾನ: ಕೇಂದ್ರ ಸಚಿವೆ ಶೋಭಾ

ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಏಕಾಏಕಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸವಾರ ನಿಯಾಮ್‌ ತಲೆ ಮೇಲೆಯೇ ಲಾರಿ ಚಕ್ರಗಳು ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಎಸಗಿದ ಲಾರಿ ಚಾಲಕ ಘಟನೆ ಬಳಿಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಲಾರಿ ಹಾಗೂ ಅದರ ಚಾಲಕನ ಪತ್ತೆಗೆ ಶೋಧಿಸಲಾಗುತ್ತಿದೆ. ಈ ಸಂಬಂಧ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕ್ಯಾಂಟರ್‌ ಡಿಕ್ಕಿಯಾಗಿ ಚಾಲಕ ಸಾವು: ನಿಂತಿದ್ದ ವಾಹನಕ್ಕೆ ಹಿಂದಿನಿಂದ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ವಾಹನ ಚಾಲಕ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ಹರೀಶ್‌(31) ಮೃತ ಚಾಲಕ. ಗಾಯಗೊಂಡಿರುವ ಮತ್ತೊಂದು ವಾಹನದ ಚಾಲಕ ಮಾದೇಶ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸೋಮವಾರ ರಾತ್ರಿ 11.40ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದಲ್ಲಿ ಚಾಲಕ ಹರೀಶ್‌ ಮಡಿವಾಳದಿಂದ ತಮಿಳುನಾಡಿನ ಹೊಸೂರಿನತ್ತ ಹೊರಟ್ಟಿದ್ದ. 

ಅಕ್ರಮ ಕಟ್ಟಡ, ಸೈಟಿಗೆ ದುಪ್ಪಟ್ಟು ಆಸ್ತಿ ತೆರಿಗೆ?: ಸಚಿವ ಈಶ್ವರ ಖಂಡ್ರೆ

ಮೇಲ್ಸೇತುವೆಯಲ್ಲಿ ಡೀಸೆಲ್‌ ಖಾಲಿಯಾಗಿ ವಾಹನ ನಿಂತಿದೆ. ಈ ವೇಳೆ ಹರೀಶ್‌ ವಾಹನದಿಂದ ಕೆಳಗೆ ಇಳಿದು ಹಿಂಬದಿ ಪರಿಶೀಲಿಸಲು ಮುಂದಾಗಿದ್ದಾನೆ. ಇದೇ ಸಮಯಕ್ಕೆ ಮೇಲ್ಸೇತುವೆಯಲ್ಲಿ ಮತ್ತೊಂದು ಬೊಲೆರೋ ವಾಹನದಲ್ಲಿ ಬಂದಿರುವ ಚಾಲಕ ಮಾದೇಶ್‌, ಹರೀಶ್‌ನ ವಾಹನ ನಿಂತಿರುವುದನ್ನು ಕಂಡು ತನ್ನ ವಾಹನವನ್ನು ಪಕ್ಕ ನಿಲ್ಲಿಸಿ ಹರೀಶ್‌ ಜೊತೆ ಮಾತನಾಡಿ ಹಗ್ಗ ಕಟ್ಟಿಎಳೆದೊಯ್ಯುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಮಾದೇಶ್‌ ಬೊಲೆರೋ ವಾಹನ ಮುಂಭಾಗ ಹಗ್ಗ ಕಟ್ಟಲು ಪರಿಶೀಲಿಸಲು ತೆರಳಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!