
ಬೆಳಗಾವಿ(ಆ.26): ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡುವ ಮೂಲಕ ನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ನಗರದ ಖಡಕ್ ಗಲ್ಲಿಯಲ್ಲಿ ಶುಕ್ರವಾರ ಜರುಗಿದೆ. ಈ ಕುರಿತು ನಾಲ್ಕಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋಕಾಕ ತಾಲೂಕಿನ ಪಟ್ಟಣದ ಹಿಂದೂ ಯುವಕ ಹಾಗೂ ಅನ್ಯ ಕೋಮಿನ ಯುವತಿ ಹುಟ್ಟಿನಿಂದಲೇ ಸ್ನೇಹಿತರಾಗಿದ್ದರು. ಕಾರ್ಯದ ನಿಮಿತ್ತ ಇಬ್ಬರೂ ಬೆಳಗಾವಿ ನಗರಕ್ಕೆ ಆಗಮಿಸಿದ ವೇಳೆ ಇಬ್ಬರು ಜತೆಯಾಗಿ ಹೋಗುವುದನ್ನು ನೋಡಿದ ಅನ್ಯಕೋಮಿನ ಯುವಕರು ಜಮಾಯಿಸಿದ್ದಾರೆ. ಈ ವೇಳೆ ಯುವಕ ಮತ್ತು ಯುವತಿಯನ್ನು ತಡೆದು ವಿಚಾರಣೆ ನಡೆಸಿದ್ದಾರೆ.
ಮುಸ್ಲಿಂ ವಿದ್ಯಾರ್ಥಿ ಅಪಹರಿಸಿ ಹಲ್ಲೆ: ಎಸ್‌ಡಿಪಿಐ ಮುಖಂಡನ ಪುತ್ರ ಸಹಿತ 7 ಜನರ ಬಂಧನ
ಈ ಸಮಯದಲ್ಲಿ ಯುವಕ, ನಾವಿಬ್ಬರೂ ಹುಟ್ಟಿನಿಂದಲೂ ಸ್ನೇಹಿತರಾಗಿದ್ದೇವೆ. ಕಾರ್ಯದ ನಿಮಿತ್ತ ಬೆಳಗಾವಿಗೆ ಬಂದಿದ್ದೇವೆ ಎಂದು ತಿಳಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಅನ್ಯಕೋಮಿನ ಯುವಕರು ಯುವತಿಯನ್ನು ವಿಚಾರಿಸಿದ್ದಾರೆ. ಅಷ್ಟರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಯುವಕರನ್ನು ಕಂಡು ಯುವತಿ ಗಾಬರಿಯಾಗಿ, ಈತ ನನ್ನ ಸ್ನೇಹಿತ ಅಲ್ಲ. ಈತನಿಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾಳೆ.
ಇದರಿಂದ ಅಸಮಾಧಾನಗೊಂಡ ಅನ್ಯಕೋಮಿನ ಯುವಕರು, ನಮ್ಮ ಸಮುದಾಯದ ಯುವತಿಯನ್ನು ಕರೆದುಕೊಂಡು ಓಡಾಡುತ್ತಿದ್ದಾಯಾ ಎಂದು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಆಗ ತಕ್ಷಣ ಸ್ಥಳೀಯರು ಜಮಾಯಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗಿಲ್ಲ. ಆಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ತಕ್ಷಣ ದೌಡಾಯಿಸಿದ ಪೊಲೀಸರು ಅಪ್ರಾಪ್ತರು ಸೇರಿದಂತೆ ನಾಲ್ಕು ಹೆಚ್ಚು ಜನರನ್ನು ವಶಕ್ಕೆ ಪಡೆದರು. ಈ ಕುರಿತು ಮಾರ್ಕೆಟ್ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ