ಜಾರ್ಖಂಡ್‌ನ ಬಹು ಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ: 14 ಮಂದಿ ಸಾವು

Published : Jan 31, 2023, 11:58 PM IST
 ಜಾರ್ಖಂಡ್‌ನ ಬಹು ಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ: 14 ಮಂದಿ ಸಾವು

ಸಾರಾಂಶ

ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗುತ್ತಿದೆ. ರಕ್ಷಣಾ ಕಾರ್ಯ ಮುಗಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಧನ್‌ಬಾದ್‌ (ಜನವರಿ 31, 2023): ಜಾರ್ಖಂಡ್‌ನ ಧನ್‌ಬಾದ್‌ನ ಬಹು ಮಹಡಿ ಕಟ್ಟಡವೊಂದರಲ್ಲಿ ಇಂದು ಸಂಭವಿಸಿದ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 14 ಜನರು ಮೃತಪಟ್ಟಿದ್ದು ಮತ್ತು ಹಲವರು ಗಾಯಗೊಂಡಿದ್ದಾರೆ. ಬಹು ಮಹಡಿ ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ ಮೃತಪಟ್ಟವರ ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ಪತ್ತೆಯಾಗಿಲ್ಲ. ಜಾರ್ಖಂಡ್‌ ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ನಗರದ ಜನನಿಬಿಡ ಪ್ರದೇಶವಾದ ಜೋರಾಫಟಕ್‌ನಲ್ಲಿರುವ 13 ಅಂತಸ್ತಿನ ಕಟ್ಟಡ - ಆಶೀರ್ವಾದ್ ಟವರ್‌ನಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಎಂಟು ಅಥವಾ 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಧನ್‌ಬಾದ್ ಉಪ ಆಯುಕ್ತ ಸಂದೀಪ್ ಕುಮಾರ್ ಈ ಬಗ್ಗೆ ತಿಳಿಸಿದ್ದು, ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದೂ ಅವರು ಹೇಳಿದರು. "ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗುತ್ತಿದೆ. ರಕ್ಷಣಾ ಕಾರ್ಯ ಮುಗಿದಿದೆ. ಆದರೆ ನಾವು ಎಷ್ಟು ಜನರನ್ನು ರಕ್ಷಿಸಿದ್ದೇವೆ ಅಥವಾ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬ ಬಗ್ಗೆ ಸರಿಯಾಗಿ ಲೆಕ್ಕ ಹಾಕಿಲ್ಲ. ಇದನ್ನು ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಜಂಟಿಯಾಗಿ ಮಾಡುತ್ತಾರೆ ಎಂದು ಅವರು ಹೇಳಿದರು.

ಇದನ್ನು ಓದಿ: ಬೆಂಗಳೂರಿನ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 3 ಕಾರುಗಳು

"ಜನರನ್ನು ಕಟ್ಟಡದಿಂದ ಹೊರಕ್ಕೆ ಕರೆತರುವುದು ನಮ್ಮ ತಕ್ಷಣದ ಗಮನವಾಗಿತ್ತು. ಯಾರೂ ಅಪಾರ್ಟ್‌ಮೆಂಟ್‌ನೊಳಗೆ ಸಿಲುಕಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರದೇಶದ ಅಂತಿಮ ಕೂಂಬಿಂಗ್ ಮಾಡುತ್ತಿದ್ದೇವೆ" ಎಂದೂ ಅವರು ಹೇಳಿದರು.

ಆದರೆ, ಈ ಘಟನೆ ಹೇಗೆ ಸಂಭವಿಸಿತು ಎಂಬ ಬಗ್ಗೆಯೂ ಸರಿಯಾದ ಕಾರಣ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಸಂದೀಪ್‌ ಕುಮಾರ್‌ ಸಿಂಗ್, ಬೆಂಕಿ ಹೇಗೆ ಪ್ರಾರಂಭವಾಯಿತು ಎಂಬುದು ಸ್ಪಷ್ಟವಾಗಿಲ್ಲ ಎಂದೂ ಹೇಳಿದರು. ಕೆಲವರು ಪೂಜೆ ಮಾಡುತ್ತಿದ್ದರು ಎಂದು ಸ್ಥಳೀಯರು ಹೇಳಿದರು, ಆದರೆ ಇದೆಲ್ಲವನ್ನೂ ಖಚಿತಪಡಿಸಬೇಕಾಗಿದೆ ಎಂದೂ ಅವರು ಹೇಳಿದರು.

ಇದನ್ನೂ ಓದಿ: Shivamogga: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ: ಉದ್ಯಮಿ ಶರತ್ ಭೂಪಾಳಂ ಸಾವು

ಈ ಹಿನ್ನೆಲೆ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟು ಮಾಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಇದೆ. 

ಇದನ್ನು ಓದಿ: Bengaluru satish store:ತಡರಾತ್ರಿ ಭಾರೀ ಅಗ್ನಿ ಅವಘಡ: ಪೂಜಾ ಸಾಮಗ್ರಿ ಗೋದಾಮಿ ಬೆಂಕಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!