
ರಾಯಚೂರು (ಜೂ.10): ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆ ಖಿನ್ನತೆಗೊಳಗಾಗಿ 12 ವರ್ಷದ ತನ್ನ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ(46), ಅಂಬಿಕಾ(12) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು. ದಾಂಪತ್ಯ ಕಲಹದಿಂದ 14 ವರ್ಷಗಳ ಹಿಂದೆಯೇ ಪತಿಯಿಂದ ದೂರವಾಗಿದ್ದ ಲಕ್ಷ್ಮೀ. ಗ್ರಾಮದಲ್ಲಿ ಕೆಲಸವಿಲ್ಲದೇ ಮಗಳೊಂದಿಗೆ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀ. ಆದರೆ ಪತಿಯಿಂದ ದೂರವಾದ ನಂತರ ಖಿನ್ನತೆಗೊಳಗಾಗಿದ್ದಳು. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಊರಿಗೆ ಮರಳಿದ್ದ ತಾಯಿ ಮಗಳು. ಇಂದು ಏಕಾಏಕಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ಮೃತ ಲಕ್ಷ್ಮೀಯ ಪುತ್ರ ಪಂಪನಗೌಡ ಲಿಂಗಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು.
ಮತ್ತೊಬ್ಬ ನೀಟ್ ಆಕಾಂಕ್ಷಿಕೋಟದಲ್ಲಿ ಆತ್ಮಹತ್ಯೆ: ಈ ವರ್ಷದ 10ನೇ ಪ್ರಕರಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ