ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

By Kannadaprabha News  |  First Published Mar 30, 2024, 12:50 PM IST

ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು. ಚೈತ್ರಾ ತನ್ನ ಮಗುವಿನೊಂದಿಗೆ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ಸಂಜೆ ವೇಳೆ ತಾಯಿ ಮತ್ತು ಮಗುವಿನ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. 

ಮಂಗಳೂರು(ಮಾ.30):  ಮಹಿಳೆಯೊಬ್ಬಳು ತನ್ನ ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಡ್ಯಾರು ಬಳಿ ಸಂಭವಿಸಿದೆ.

ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು. ಚೈತ್ರಾ ತನ್ನ ಮಗುವಿನೊಂದಿಗೆ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ಸಂಜೆ ವೇಳೆ ತಾಯಿ ಮತ್ತು ಮಗುವಿನ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. 

Tap to resize

Latest Videos

ಮೊದಲ ಮುಟ್ಟು; ನೋವಿಗೆ ಹೆದರಿ 14 ವರ್ಷದ ಹುಡುಗಿ ಆತ್ಮಹತ್ಯೆ!

ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

click me!