
ಹರಪನಹಳ್ಳಿ(ಅ.15): ಕ್ಲುಲ್ಲಕ ವಿಚಾರಕ್ಕೆ ಗಲಾಟೆ ನಡೆದು ತಾಯಿ ತನ್ನಿಬ್ಬರು ಮಕ್ಕಳಿಗೆ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದು, ಇದರಿಂದ ಮಗಳು ಮೃತಪಟ್ಟರೆ, ಮಗ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಘಟನೆ ಹರಪನಹಳ್ಳಿ ತಾಲೂಕಿನ ಹುಲ್ಲಿಕಟ್ಟಿ ಗ್ರಾಮದಲ್ಲಿ ಶನಿವಾರ ನಡೆದಿದೆ. ನಂತರ ತಾಯಿ ನೇಣಿಗೆ ಶರಣಾಗಿದ್ದಾಳೆ.
ಶಮನಾಬಾನು (18) ತಾಯಿ ಹಲ್ಲೆಯಿಂದ ಮೃತಪಟ್ಟಾಕೆ. ಬೇಗಂಬೀ (50) ನೇಣಿಗೆ ಶರಣಾದಾಕೆ. ಮಕ್ಕಳು ಮಾತು ಕೇಳುತ್ತಿಲ್ಲ ಎನ್ನುವ ವಿಚಾರದಲ್ಲಿ ಶುಕ್ರವಾರ ರಾತ್ರಿ ಮಗಳು ಶಮನಾಬಾನು, ಪುತ್ರ ಅಮಾನುಲ್ಲಾ ಹಾಗೂ ತಾಯಿ ಮಧ್ಯೆ ಜಗಳ ಆರಂಭವಾಗಿದೆ. ಇದು ತಾರಕಕ್ಕೇರಿ ಬೆಳಗಿನ ಜಾವ ಇಬ್ಬರೂ ಮಕ್ಕಳ ತಲೆಗೆ ತಾಯಿ ಕಟ್ಟಿಗೆಯಿಂದ ಹೊಡೆದಿದ್ದಾಳೆ.
ಕೊಪ್ಪಳ: ಹಣಕ್ಕಾಗಿ ವಿಪರೀತ ಕಿರುಕುಳ, ಗುತ್ತಿಗೆದಾರ ಆತ್ಮಹತ್ಯೆ
ಘಟನೆಯಲ್ಲಿ ಪುತ್ರಿ ಸ್ಥಳದಲ್ಲೇ ಮೃತಪಟ್ಟರೆ, ಪುತ್ರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ. ಇಬ್ಬರೂ ಮಕ್ಕಳು ಮೃತಪಟ್ಟರೆಂದು ಭಾವಿಸಿ ನೊಂದುಕೊಂಡ ಬೇಗಂಬೀ ನಂತರ ತಾನು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ