
ಚಳ್ಳಕೆರೆ(ಡಿ.09): ಗೃಹಿಣಿಯೋರ್ವಳು ತನ್ನ ಎರಡು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ, ನಂತರ ತಾನೂ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಲಗಟ್ಟೆಯಲ್ಲಿ ನಡೆದಿದೆ.
ತಿಪ್ಪೇಸ್ವಾಮಿ ಎಂಬುವವರ ಪತ್ನಿ ಲತಾ (೨೫), ತನ್ನ ಮಕ್ಕಳಾದ ಪ್ರಣೀತಾ (೫), ಒಂದೂವರೆ ವರ್ಷ ಹಸುಗೂಸು ಜ್ಞಾನೇಶ್ವರನನ್ನು ಮನೆಯ ಬಚ್ಚಲಿನಲ್ಲಿದ್ದ ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು, ನಂತರ ತಾನು ನೇಣುಹಾಕಿಕೊಂಡು ಮೃತಪಟ್ಟಿದ್ದಾಳೆ.
ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!
ಈ ಸಂದರ್ಭದಲ್ಲಿ ಗಂಡ ತಿಪ್ಪೇಸ್ವಾಮಿ ತೋಟಕ್ಕೆ ಹೋಗಿದ್ದರು. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಲತಾ ಹಾಗೂ ಮಕ್ಕಳ ಸಾವಿನ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ